ಮೂಡಲಗಿ: ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯವಿದ್ದು ಮಾಹಾತ್ಮ ಗಾಂಧೀಜಿಯವರು ಕಂಡಂತ ಕನಸು ಹಳ್ಳಿಗಳ ಅಭಿವೃದ್ದಿಯಾದರೆ ಮಾತ್ರ ದೇಶದ ಅಭಿವೃದ್ದಿಯಾಗಲು ಸಾದ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಗುರುವಾರ ಪಟ್ಟಣದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಕಾರ್ಯಾಲಯದಲ್ಲಿ ಭಾರತ ಸರಕಾರ ನೇಹರು ಯುವ ಕೇಂದ್ರದ ವತಿಯಿಂದ ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನ …
Read More »Monthly Archives: ನವೆಂಬರ್ 2020
ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ : ವಿರೂಪಾಕ್ಷಪ್ಪ
ಗೋಕಾಕ: ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಗತಿಸಿದರೂ ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು. ಗುರುವಾರದಂದು ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬರ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ …
Read More »ಗುಣಾತ್ಮಕ ಕಾಮಗಾರಿಯನ್ನು ಮಾಡಿ : ಬಸವರಾಜ ಹೆಗ್ಗನಾಯಿಕ
ಗೋಕಾಕ: ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸಮುದಾಯದ ಜನರ ಅಭಿವೃದ್ಧಿಗಾಗಿ ಸರ್ಕಾರ ನಿಗದಿ ಪಡಿಸಿದ ಅನುದಾನವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಿಶೀಲನೆ ಮಾಡಿ ಗುಣಾತ್ಮಕ ಕಾಮಗಾರಿಯನ್ನು ಮಾಡಬೇಕೆಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ಬುಧವಾರದಂದು ತಾಲೂಕಾ ಪಂಚಾಯತ ಸಭಾಭವನದಲ್ಲಿ ಎಸ್.ಸಿಪಿ ಮತ್ತು ಟಿಎಸ್ ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಎಸ್.ಸಿ ಮತ್ತು ಎಸ್.ಟಿ ಸಮುದಾಯದವರಿಗೆ …
Read More »ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ 18 ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿವೆ. ತಲಾ 5 …
Read More »ಬಸವಣ್ಣನವರ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ: ತಪ್ಪತಸ್ಥರ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಗ್ರಹ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ ಖಂಡ್ರೆ, ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆ ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ …
Read More »ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಮಂಡಲದಿಂದ ನಡೆಯುತ್ತಿರುವ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀಡಿರುವ ಮುನ್ನಡೆಗಿಂತ ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ದಾಖಲೆ …
Read More »ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ
ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ನ.18 ರಂದು ಬೆಳಗಾವಿಯಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಮಹಾಂತೇಶ ನಗರದಲ್ಲಿರುವ ಬೆಳಗಾವಿ ಹಾಲು ಒಕ್ಕೂಟದ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನ. 18 ರಂದು ನಡೆಯಲಿರುವ ಸಹಕಾರ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ಕೆಎಂಎಫ್ ವಹಿಸಿಕೊಳ್ಳಲಿದ್ದು, ಬೆಳಗಾವಿ ಹಾಲು ಒಕ್ಕೂಟ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿ, ಬೆಳಗಾವಿ …
Read More »