ಮಂಗಳವಾರ , ನವೆಂಬರ್ 26 2024
kn
Breaking News

Yearly Archives: 2020

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ 10.30 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು …

Read More »

ಭಕ್ತರ ಆಚರಣೆಗಳಿಂದ ಜಂಗಮ ಸಂಸ್ಕøತಿ ಉಳಿಯುತ್ತದೆ : ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ

ಮೂಡಲಗಿ: ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಸ್ಥಳೀಯ ಕುರುಹಿನಶೆಟ್ಟಿ ಕೋ.ಆಪ್ ಸೊಸೈಟಿ ನಿರ್ದೇಶಕ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿ ನಮನ ಮತ್ತು ಸ್ವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು ಶ್ರದ್ಧೆ, ಭಕ್ತಿ ಮತ್ತು ಆಚಾರ ಇವು ಶಾಶ್ವತ ಮೌಲ್ಯಗಳಾಗಿವೆ ಎಂದರು. ಆಧುನಿಕತೆಯ …

Read More »

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ

ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದರು. 2019 ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ …

Read More »

ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ

ಮೂಡಲಗಿ: ‘ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರ, ಭಾಷೆಯ ವರ್ಗಿಕರಣ ಕೈ ಬಿಟ್ಟು ಕನ್ನಡಿಗರಪರ ಸರ್ಕಾರವೆಂದು ಸಾಬೀತು ಪಡಿಸುವುದಕ್ಕೆ ಮುಂದಾಗಲಿ ಹಾಗೂ ಈ ಬಾರಿಯ ಛಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಿ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಮುಖಂಡ ಶಿವರಡ್ಡಿ ಹುಚರಡ್ಡಿ ಹೇಳಿದರು. ಬುಧವಾರ ಪ್ರೆಸ್‍ಕ್ಲಬ್ ಕಾರ್ಯಾಲಯದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮುದಾಯದ ಅಭಿವೃದ್ದಿಗಾಗಿ ಅಭಿವೃದ್ದಿ ಪ್ರಾಧಿಕಾರ ರಚಿಸಿದಂತೆ ಇನ್ನುಳಿದ ಸಮುದಾಯಗಳಿಗೂ ಪ್ರಾಧಿಕಾರ ರಚಿಸಲಿ. …

Read More »

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕಾಮಗಾರಿಗೆ 5.35 ಕೋಟಿ ರೂ. …

Read More »

ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ಪತ್ರಿಕಾ ವಿತರಕರು,ಪತ್ರಕರ್ತರು, ಚಾಲಕರು ಮತ್ತು ನಿರ್ವಾಹಕರ ಸೇವಾ ಕಾರ್ಯ ಮೆಚ್ಚುವಂತಹದು: ಸಂಜಯ ಖೋತ

ಮೂಡಲಗಿ: ನಾಡಿನಾದ್ಯಂತ ಜನತೆ ಹಬ್ಬ ಆಚರಿಸುವ ಸಮಯದಲ್ಲಿ ಪತ್ರಿಕಾ ವಿತರಕರು,ಪತ್ರಕರ್ತರು,ಸಾರಿಗೆ ಸಿಬ್ಬಂದಿ ಮತ್ತು ಚಾಲಕ, ನಿರ್ವಾಹಕರು ತಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಸಾರ್ವಜನಿಕರ ಪ್ರಾಯಾಣಿಕರ ಸೇವೆಯಲ್ಲಿ ತೊಡಗುವ ಕಾರ್ಯ ಅಮೋಘವಾಗಿದೆ ಎಂದು ಎ.ಬಿ.ವಿ.ಪಿ. ಅಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಸಂಜಯ ಖೋತ ಹೇಳಿದರು, ಅವರು ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಬಸ್ ನಿಲ್ದಾನದಲ್ಲಿ ಇಲ್ಲಿಯ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಹಾಗೂ ಕರುನಾಡು ಸೈನಿಕ ಕೇಂದ್ರದಿಂದ ಹಮ್ಮಿಕೊಂಡ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಪುನರ ಆಯ್ಕೆ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಪುನರ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ನಿರ್ದೇಶಕರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಉಪಾಧ್ಯಕ್ಷರೇ ಮುಂದುವರೆಯಲಿದ್ದಾರೆ. ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ …

Read More »

‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ :ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

ಮೂಡಲಗಿ: ‘ರವಿ ಬೆಳಗೆರೆ ಅವರ ಮಾಂತ್ರಿಕ ಬರವಣಿಗೆಯಿಂದ ಓದುಗರ ಸಮೂಹವನೇ ಸೃಷ್ಟಿ ಮಾಡಿದ್ದರು’ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅಕಾಲಿಕವಾಗಿ ನಿಧನ ಹೊಂದಿದ ಹಾಯ್ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕರಾದ ರವಿ ಬೆಳಗೆರೆ ಅವರಿಗೆ ಮೂಡಲಗಿ ಪತ್ರಿಕಾ ಬಳಗದ ಕಚೇರಿಯಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾರಂಭದ ದಿನಗಳಲ್ಲಿ ಸಾಕಷ್ಟು ಕಷ್ಟ, ನೋವನ್ನು ಉಂಡು ಬೆಳೆದವರು …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

You cannot copy content of this page