ಸೋಮವಾರ , ನವೆಂಬರ್ 25 2024
kn
Breaking News

Monthly Archives: ಫೆಬ್ರವರಿ 2021

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದoತೆ ಕ್ರಮ …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮವಾಗಿದ್ದು, ಎಲ್ಲರೂ ಈ ವರದಿಯನ್ನು …

Read More »

ಕಳ್ಳಿಗುದ್ದಿ ಗ್ರಾಪಂಗೆ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ , ಉಪಾಧ್ಯಕ್ಷೆಯಾಗಿ ಶೋಭಾ ಮೆಟ್ಟಿನ ಆಯ್ಕೆ

ಮೂಡಲಗಿ: ಕಳ್ಳಿಗುದ್ದಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗೋಕಾಕ ಜಿಆರ್‍ಬಿಸಿ ಎಇಇ ಶ್ರೀನಿವಾಸ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 14 ಜನ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದ ಮೇರೆಗೆ, ಗ್ರಾಮಗಳ ಅಭಿವೃದ್ಧಿ ಹಿತ ದೃಷ್ಠಿಯಿಂದ ಅವಿರೋಧ ಆಯ್ಕೆಯನ್ನು ಗ್ರಾಮಗಳ ಮುಖಂಡರುಗಳ ಉಪಸ್ಥಿತಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ನೂತನ ಸದಸ್ಯರುಗಳು: ರೇಣುಕಾ ದಳವಾಯಿ, …

Read More »

ಮೂಡಲಗಿ ತಾಲೂಕಿನ ಪ್ರಥಮ ಕಸಾಪ ಸಮ್ಮೇಳನ ಪೆ.13 ರಂದು

ಮೂಡಲಗಿ: ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಫೆಬ್ರುವರಿ 13 ಶನಿವಾರದಂದು ಮೂಡಲಗಿ ನಗರದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಸಲು ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಲಾಗಿದೆ. ಕಳೆದ ಸಾಲಿನಲ್ಲಿ ಕೋವಿಡ-19 ಮಹಾಮಾರಿ ಪರಿಣಾಮ ಲಾಕ್ ಡೌನ್‍ದಿಂದ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಸಮ್ಮೇಳನವನ್ನು ಈ ಹಿಂದೆ ನಿರ್ಧರಿಸಿದಂತೆ ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರ ಸರ್ವಾಧ್ಯಕ್ಷತೆಯಲ್ಲಿ ವಿಜೃಂಭನೆಯಿಂದ ಹಮ್ಮಿಕೊಳ್ಳುವುದಾಗಿ ಪರಿಷತ್ತ ಅಧ್ಯಕ್ಷ ಸಿದ್ರಾಮ …

Read More »

ಫೆ 07 ಬೆಂಗಳೂರಿನಲ್ಲಿ “ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ” : ಸೋಮಣ್ಣ ಮೌರ್ಯ

ವರದಿ: ಕೆ.ವಾಯ್ ಮೀಶಿ ಬೆಂಗಳೂರು: ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದು ಸೋಮಣ್ಣ ಮೌರ್ಯ ಮಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಬೆಂಗಳೂರಿನಲ್ಲಿ …

Read More »

ನೂತನ ಶಾಖಾಧಿಕಾರಿಯಾಗಿ ಬಿ ವಾಯ್ ಕುರಿ ಅಧಿಕಾರ ಸ್ವೀಕಾರ

ಮೂಡಲಗಿ: ಇಲ್ಲಿಯ ಹೆಸ್ಕಾಂ ಕಚೇರಿಯ ಹಳ್ಳೂರ ಗ್ರಾಮ ಶಾಖಾಧಿಕಾರಿಗಳಾಗಿ ಬಿ ವಾಯ್ ಕುರಿ ಅಧಿಕಾರ ವಹಿಸಿಕೊಡರು. ಈ ಮೊದಲು ಇವರು ನರಗುಂದನಲ್ಲಿ ಪಟ್ಟಣ ಶಾಖಾಧಿಕಾರಿಯಾಗಿ ಮೂರು ವರ್ಷ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡು ಸಧ್ಯ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹಳ್ಳೂರ ಗ್ರಾಮ ಶಾಖಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಶಾಖಾಧಿಕಾರಿಗೆ ಸಿಬ್ಬಂದಿ ವರ್ಗ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಸಿಬ್ಬಂದಿ,ರೈತರು ಮತ್ತು ಗ್ರಾಹಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಉತ್ತಮ ಸೇವೆ ಸಲ್ಲಿಸುವುದಾಗಿ ಹೇಳಿದರು.

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೀಯ

ಗೋಕಾಕ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು …

Read More »

ಕೇಂದ್ರ ಸರಕಾರದ ಬಜೆಟ್ ಸ್ವಾಗತಾರ್ಹ : ಈರಣ್ಣ ಕಡಾಡಿ

ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಅವರು ಕರೋನಾ ಹೊಡೆತಕ್ಕೆ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಪರಿಸ್ಥಿತಿಗೆ ಬಾರಿ …

Read More »

You cannot copy content of this page