ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು ೫೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಮುದಾಯದ …
Read More »Monthly Archives: ಅಕ್ಟೋಬರ್ 2022
ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು: ಅಜೀತ ಮನ್ನಿಕೇರಿ
ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯಬ್ಬರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಅಖಿಲ್ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ …
Read More »ಮೂಡಲಗಿ ಪಟ್ಟಣದ ರಸ್ತೆಗಳ ಅಭಿವೃದ್ದಿಗೆ ನಗರೋತ್ಥಾನ ಯೋಜನೆಯಡಿ ಅನುದಾನ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ಪಟ್ಟಣದ ರಸ್ತೆಗಳ ಅಭಿವೃದ್ದಿಗೆ ನಗರೋತ್ಥಾನ ಯೋಜನೆಯಡಿ ಅನುದಾನ ಬಿಡುಗಡೆಗೊಂಡಿದ್ದು, ಮತ್ತೇ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಪೌರಾಡಳಿತ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದ ಬಳಿ ನಗರೋತ್ಥಾನ ಯೋಜನೆಯಡಿ 4.05 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಡಿಸೆಂಬರ ತಿಂಗಳ ಅಂತ್ಯದೊಳಗೆ ಮೂಡಲಗಿ …
Read More »ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ
ಮೂಡಲಗಿ: ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‌ದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ ತಿಂಗಳದಲ್ಲಿ ಉದಯೋನ್ಮುಖ ಕವಿಗಳ ಕವಿಗೋಷ್ಠಿಯನ್ನು ಏರ್ಪಡಿಸುವರು. ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವoತ ವಿಷಯ ಕುರಿತಾದ ಸ್ವರಚಿತ ಕವನಗಳನ್ನು ಕವಿಗೋಷ್ಠಿಯ ಮುಂಚಿತವಾಗಿ ಆಹ್ವಾನಿಸುವರು. ಕವನವನ್ನು ಕಾಗದದ ಒಂದೆ ಮಗ್ಗುಲಲ್ಲಿ ಬರೆದಿರುವ ಇಲ್ಲವೆ ಡಿಟಿಪಿ ಮಾಡಿಸಿ ವಿಳಾಸ, ಪೋಟೋ ಮೊಬೈಲ್ ಸಂಖ್ಯೆಯೊoದಿಗೆ ಕಸಾಪ ಗೌರವ ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಶ್ರೀರಂಗ ಹಲ್ಲಿನ ದವಾಖಾನೆ, ಕಾಲೇಜು …
Read More »ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಷ್ಟದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಿಂದ ಸಂಚಾರ ಪಶು ಚಿಕಿತ್ಸಾಲಯ ವಾಹನ ಸೌಲಭ್ಯ
ಗೋಕಾಕ : ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ ೧೯೬೨ ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …
Read More »ಪಂಚಮಸಾಲಿ ಸಮಾಜದ ೨ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ ೨೦ …
Read More »ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಾಧ್ಯಮ ಕ್ಷೇತ್ರವು ಇಡೀ ಭಾರತ ದೇಶದ ಚಿತ್ರಣವನ್ನು ಬದಲಾವಣೆ ಮಾಡುವಂತ ಸಾಮರ್ಥ್ಯವನ್ನು ಹೊಂದಿದ್ದು, ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ. ಕೆಲವು ಜನರು ಮಾಡುವಂತ ತಪ್ಪು ಕೆಲಸಗಳನ್ನು ಸಾರ್ವಜನಿಕರ ಮುಂದಿಟ್ಟು ಅವರನ್ನು ತಿದ್ದುವಂತ ಕಾರ್ಯ ಮಾಧ್ಯಮ ಕ್ಷೇತ್ರ ಮಾಡುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊoಡ ಮೂಡಲಗಿ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ …
Read More »ಅರಭಾವಿ ಮತಕ್ಷೇತ್ರದ ಕಲ್ಲೋಳಿಯಲ್ಲಿ ಅ. ೦೭ ರಂದು ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ತಾಲೂಕ ಮಟ್ಟದ ಬೃಹತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಸಮಾರೋಪ ಸಮಾರಂಭ ಅ-೦೭ ರಂದು ಮಧ್ಯಾಹ್ನ ೦೩.೦೦ ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದ್ದು, ಸಮಾವೇಶ ಯಶಸ್ವಿಯಾಗಲು ಇಂದು ನಡೆದ ಪಂಚಮಸಾಲಿ ಸಮಾಜದ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಪಂಚಮಸಾಲಿ ಲಿಂಗಾಯತರನ್ನು ೨ಎ ವರ್ಗದಲ್ಲಿ ಸೇರ್ಪಡೆ ಮಾಡಲು ಹೊರಾಟ ನಿರಂತರವಾಗಿದ್ದು, ಲಿಂಗಾಯತ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಲಿಗೆ ೨ಎ ಮೀಸಲಾತಿಯಿಂದ ಉಜ್ವಲ ಭವಿಷ್ಯವಿದೆ. ಕೂಡಲ …
Read More »ಮಹಾತ್ಮ ಗಾಂಧೀಜಿ, ಲಾಲ ಬಹದ್ದೂರ ಶಾಸ್ತ್ರೀಜಿಯವರ ಆದರ್ಶಗಳನ್ನು ಪಾಲಿಸಬೇಕು:ರಮೇಶ ಸಣ್ಣಕ್ಕಿ
ಮೂಡಲಗಿ: ಜಗತ್ತಿಗೆ ಅಹಿಂಸಾತ್ಮಕದ ಶಕ್ತಿಯ ಅರಿವು ಮೂಡಿಸಿದ ಮಹಾತ್ಮ ಗಾಂಧೀಜಿಯವರ ಸರಳ ವ್ಯಕ್ತಿತ್ವ ಮತ್ತು ನೇರ ನಿಷ್ಠುರ ವ್ಯಕ್ತಿತ್ವದ ಶಾಂತಿ ಸರಳತೆಯ ಲಾಲ ಬಹದ್ದೂರ ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಡಿ ಎಸ್ ಎಸ್ ಜಿಲ್ಲಾ ಸಂಚಾಲಕ, ಪುರಸಭೆ ಮಾಜಿ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಇಲ್ಲಿನ ಅಂಬೇಡ್ಕರ ನಗರದ ಮಹಾ ನಾಯಕ ಡಾ. ಬಿ.ಆರ್ ಅಂಬೇಡ್ಕರ ಮಂದಿರದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರೀ ಅವರ …
Read More »ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟoಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-೧ ಮತ್ತು ಖಜಾನೆ-೨ ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ …
Read More »