ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ ಅವರು …
Read More »Yearly Archives: 2022
ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ- ನೂಕಾಟ ಮಾಡಿದವರು ಕ್ಷಮೆಯಾಚನೆ
ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ ನೂಕಾಟ ಮಾಡುವುದರ ಮೂಲಕ ಹಲ್ಲೆಗೆ ಮುಂದಾಗಿದ್ದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಭೆಗೆ ಆಹ್ವಾನ …
Read More »ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ ಅಧಿಕೃತ …
Read More »ರಾಜ್ಯಾಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ:ಖಂಡನೆ,ಕ್ಷಮೆಯಾಚನೆಗೆ ಆಗ್ರಹ
ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಲ್ಲದವರು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ ನಡೆಸಿದವರ ಕ್ರಮವನ್ನು ವಿಕಲಚೇತನ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಅವರು ಖಂಡಿಸುವುದಲ್ಲದೇ ಕೂಡಲೇ ಹಲ್ಲೆಗೆ ಯತ್ನ ನಡೆಸಿದವರು ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಜ.೨೯ ರ ಶನಿವಾರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಅವರು …
Read More »ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕಗಳನ್ನು ವಿತರಿಸಿ ಅವರು ಮಾತನಾಡಿದರು. ರೈತರ ಆರ್ಥಿಕಾಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ ಸೌಲಭ್ಯಗಳನ್ನು …
Read More »ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಕೆಎಂಎಫ್ ೨೦೨೦-೨೧ನೇ ಸಾಲಿನ …
Read More »ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು
ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ …
Read More »ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ :ಬೀರಪ್ಪ ಅಂಡಗಿ ಚಿಲವಾಡಗಿ
ಕೊಪ್ಪಳ: ಕೋವಿಡ್ 19 ರ ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ …
Read More »ಮೂಡಲಗಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಮಾರಾಟವಾಗುತ್ತಿದೆಯಾ? ಎಲ್ಲಿದೆ ಜಿಲ್ಲಾಡಳಿತ? ಎಲ್ಲಿದೆ ಆರೋಗ್ಯ ಇಲಾಖೆ?
ಮೂಡಲಗಿ: ಜಗತ್ತಿನಾದ್ಯಂತ ಕೊರೋನಾ ಮಾಹಾಮಾರಿ 2ವರ್ಷಗಳಿಂದ ಅತೀವವಾಗಿ ಕಾಡುತ್ತಿದೆ. ಇದರಿಂದಾಗಿ ತತ್ತರಗೊಂಡ ಸರ್ಕಾರಗಳು ಎಚ್ಚೆತ್ತು, ಲಸಿಕೆ ಕಂಡು ಹಿಡಿದು ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಜನರ ಮುಂದೆ ಇಟ್ಟಿದೆ. ಸರ್ಕಾರ ಕೊರೋನಾ ಹೆಚ್ಚಳ ವೇಳೆ ಎರಡನೆ ಡೋಸ್ ಪಡೆಯುವಂತೆ ಜನತೆಗೆ ಸಾಕಷ್ಟು ಮನವಿ ಮಾಡಿಕೊಳ್ಳುತ್ತಿದೆ. ಮೊದಲು ಮತ್ತು ಎರಡನೇಯ ಡೋಸ್ ಜನಸಾಮಾನ್ಯರಿಗೆ ಬೇಗನೆ ನೀಡುವಂತೆ ಸಂಬಂದ ಪಟ್ಟ ಇಲಾಖೆಗಳು, ಸ್ಥಳಿಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಒತ್ತಡ ಹಾಕುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದರೆ …
Read More »