ಶುಕ್ರವಾರ , ಜನವರಿ 3 2025
kn
Breaking News

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ 10.30 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ನ.21 ರಿಂದ ಡಿ.5 ರವರೆಗೆ ಒಟ್ಟು 15 ದಿನಗಳವರೆಗೆ ಸುಮಾರು 6.80 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆ. ಅದಕ್ಕಾಗಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸಮಸ್ತ ರೈತ ಬಾಂಧವರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page