ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ ಅವರಿಗೆ ಬಡ್ತಿ
gcsteam
ಫೆಬ್ರವರಿ 28, 2021
Recent Posts
667 Views
- ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ.
ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ ನೆಚ್ಚಿನ ಅಧಿಕಾರಿಯಾಗಿದ್ದರು. ಆರ್.ಡಿ.ಪಿ.ಆರ್ ಇಲಾಖೆಯ ಕೆಲಸದ ವ್ಯಾಪ್ತಿ ಬಹು ವಿಸ್ತಾರವಾಗಿದ್ದು ಎಷ್ಟೆ ಒತ್ತಡದ ಕಾಮಗಾರಿ ಕೆಲಸಗಳು, ಚುನಾವನೆ ಕರ್ತವ್ಯ, ಪ್ರವಾಹ ಸಂದರ್ಭ, ಕೊರೋನಾ ಸಂದರ್ಭದಲ್ಲಿ ಗ್ರಾಮ ಪಂಚಾಯತಗಳಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಅವರ ಕಾರ್ಯವೈಕರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.