ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಹೇಳಿದರು.
ತಮ್ಮ ತಾಯಿ-ತಂದೆಯವರ ಸ್ಮರಣಾರ್ಥವಾಗಿ ನಮ್ಮ ಕುಟುಂಬವು ಶ್ರೀಗಳ ಸಂಕಲ್ಪದಂತೆ ಅರಭಾವಿ ಮಠದಲ್ಲಿ ಸುಸಜ್ಜಿತ ಸಮುದಾಯ ಭವನವನ್ನು ನಿರ್ಮಾಣ ಮಾಡಿದೆ. ನಿರ್ಮಾಣದ ಕಾಮಗಾರಿ ಮುಗಿದಿದ್ದು, ಶೀಘ್ರದಲ್ಲಿಯೇ ಇದನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ಹೇಳಿದರು.
ಗೋಕಾವಿ ನಾಡಿನ ಪಂಚ ಪೀಠಗಳಲ್ಲಿ ಒಂದಾಗಿರುವ ಅರಭಾವಿ ದುರದುಂಡೀಶ್ವರ ಮಠವು ನಮ್ಮ ರಾಜ್ಯವಲ್ಲದೇ ನೆರೆಯ ರಾಜ್ಯಗಳ ಅಪಾರ ಭಕ್ತ ಸಮೂಹವನ್ನು ಹೊಂದಿದ್ದು, ಈ ಮಠಕ್ಕೆ ಭವ್ಯ ಪರಂಪರೆ ಮತ್ತು ಇತಿಹಾಸ ಹೊಂದಿದೆ. ಮೊದಲಿನಿಂದಲೂ ದೈವಿ ಭಕ್ತರಾಗಿರುವ ನಮ್ಮ ಕುಟುಂಬವು ಅದರಲ್ಲಿಯೂ ನಮ್ಮ ದಿ. ತಾಯಿ ಭೀಮವ್ವಾ ಹಾಗೂ ತಂದೆ ದಿ. ಲಕ್ಷ್ಮಣರಾವ್ ಜಾರಕಿಹೊಳಿ ಅವರು ಅರಭಾವಿ ದುರದುಂಡೀಶ್ವರ ಮಠದ ಪರಮ ಭಕ್ತರಾಗಿ ಗುರುತಿಸಿಕೊಂಡಿದ್ದರು. ಹೆತ್ತವರ ಸ್ಮರಣಾರ್ಥವಾಗಿ ಮಠದ ಆವರಣದಲ್ಲಿ ಭವ್ಯವಾದ ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.
ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಅರಭಾವಿ ಪಟ್ಟಣ ಪಂಚಾಯತ ಅಧ್ಯಕ್ಷ ಲಕ್ಷ್ಮಣ ನಿಂಗನ್ನವರ, ಕಾಡಯ್ಯ ದಡ್ಡಿ, ಮಲ್ಲಿಕಾರ್ಜುನ ಘಿವಾರಿ, ಗುರುಸಿದ್ದಪ್ಪ ಅಂಗಡಿ, ಜಿಪಂ ಮಾಜಿ ಸದಸ್ಯ ಶಂಕರ ಬಿಲಕುಂದಿ, ಮುತ್ತೆಪ್ಪ ಜಲ್ಲಿ, ನಿಂಗಪ್ಪ ಇಳಿಗೇರ, ಭೀಮಪ್ಪ ಹಳ್ಳೂರ, ಸಾತಪ್ಪ ಜೈನ್, ಯಲ್ಲಪ್ಪ ಸತ್ತಿಗೇರಿ, ಮಾರುತಿ ಶಿರಗೂರ, ರಾಯಪ್ಪ ಬಂಡಿವಡ್ಡರ, ಕೆಂಚಪ್ಪ ಮಂಟೂರ, ಭೀಮಪ್ಪ ಗಡ್ಡಿ, ಅಶೋಕ ಬಂಡಿವಡ್ಡರ, ಪಪಂ ಸದಸ್ಯರಾದ ಮಹಾಂತೇಶ ನೇಮಗೌಡರ, ಅಡಿವೆಪ್ಪ ಬಿಲಕುಂದಿ, ರಮೇಶ ಮಾದರ, ಅಶೋಕ ಪೂಜೇರಿ, ಪಪಂ ಮುಖ್ಯಾಧಿಕಾರಿ ಕೆ.ಬಿ. ಬೆಣ್ಣಿ, ಗುತ್ತಿಗೆದಾರ ಲಕ್ಷ್ಮಣ ಗಡಾದ, ಅರಭಾವಿ ಮಠದ ಭಕ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Check Also
ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ
Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …