ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ.
ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು
ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆಯ ವ್ಯಕ್ತಿ ಯಾಗಿದ್ದ ಜಾಲಪ್ಪ ಅವರ ನಿಧನದಿಂದ ರಾಜ್ಯಕ್ಕೆ ಅಪಾರ ಹಾನಿಯಾಗಿದೆ. ರಾಜಕೀಯ ಮತ್ರವಲ್ಲದೇ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿಯೂ ಅವರ ಸೇವೆ ಅಪಾರವಾಗಿತ್ತು ಎಂದು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
Sarvavani Latest Kannada News