ಗೋಕಾಕ್- ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
Sarvavani Latest Kannada News