ಸೋಮವಾರ , ಸೆಪ್ಟೆಂಬರ್ 9 2024
kn
Breaking News

ಲೇಖನ: ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ

Spread the love

ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ಪ್ರಶಸ್ತಿ, ಗೌರವ
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ರಾಷ್ಟ್ರೀಯ ಪೌರ ಪ್ರಶಸ್ತಿ ,

ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ.

ವೀರಚಕ್ರ ಪ್ರಶಸ್ತಿ .

ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ

ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.

ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ.

ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ.ವನಮಾತೆ ಪ್ರಶಸ್ತಿ.

ಶ್ರೀಮಾತಾ ಪ್ರಶಸ್ತಿ.

ಕರ್ನಾಟಕ ಪರಿಸರ ಪ್ರಶಸ್ತಿ.

ಮಹಿಳಾರತ್ನ ಪ್ರಶಸ್ತಿ

ನ್ಯಾಷನಲ್ ಸಿಟಿಜನ್ ಪ್ರಶಸ್ತಿ.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.

೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.

೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಪ್ರಸ್ತುತದ ಚಟುವಟಿಕೆಗಳು
ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು. ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ. ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ಉಪನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ.

ಲೇಖಕರು
ಪ್ರೊ ರಾಜಶೇಖರ ಶೇಗುಣಸಿ, ಶ್ರೀಮತಿ ಶಿವಲೀಲಾ ಪಾರ್ವತಿ ಇಂಗ್ಲಿಷ್ ಉಪನ್ಯಾಸಕರು ಹಾಗೂ ಸಿಬಿ ಕುಲಿಗೋಡ ಪದವಿ ಕಾಲೇಜು ಮುಗಳಖೋಡ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page