ಬುಧವಾರ , ಏಪ್ರಿಲ್ 17 2024
kn
Breaking News

gcsteam

ಸ್ವಾತಂತ್ರ್ಯ ಹೋರಾಟಗಾರರಾದ ದಿ. ರಾವಜೇಪ್ಪ ಬಾಲಪ್ಪ ಸೋನವಾಲಕರ ಇವರ ಸ್ಮರಣಾರ್ಥ ನೀಡುವ ೧ ಲಕ್ಷ ರೂ.ಗಳ ಪ್ರೋತ್ಸಾಹಕ ಬಹುಮಾನ ವಿತರಣೆ

ಮೂಡಲಗಿ: ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ತಾಲೂಕಾ ಮಟ್ಟದ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ನೀಡುವ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿನಿಯರಿಗೆ ನೀಡುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿ. ರಾವಜೇಪ್ಪ ಬಾಲಪ್ಪ ಸೋನವಾಲಕರ ಇವರ ಸ್ಮರಣಾರ್ಥ ಇವರ ಮೊಮ್ಮಗ ಡಾ. ಪ್ರದೀಪ ಸುಭಾಸ ಸೋನವಾಲಕರ ಇವರು ನೀಡುವ ೧ ಲಕ್ಷ ರೂ.ಗಳ ಪ್ರೋತ್ಸಾಹಕ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು. ಮೂಡಲಗಿ …

Read More »

ಧರ್ಮಟ್ಟಿಯಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಸಂಗೋಳ್ಳಿ ರಾಯಣ್ಣರ ಜನ್ಮ ದಿನೋತ್ಸವ ಅಂಗವಾಗಿ ರಾಜ್ಯ ಮಟ್ಟದ ಟಗರಿನ ಕಾಳಗ

ಮೂಡಲಗಿ : ಸಮೀಪದ ಧರ್ಮಟ್ಟಿ ಗ್ರಾಮದ ಧರ್ಮಟ್ಟಿ ವಿದ್ಯಾಲಯ ಧರ್ಮಟ್ಟಿಯಲ್ಲಿ ೭೫ ನೇ ಸ್ವಾತಂತ್ರ್ಯೋತ್ಸವ ಹಾಗೂ ಸಂಗೋಳ್ಳಿ ರಾಯಣ್ಣರ ಜನ್ಮ ದಿನೋತ್ಸವ ಅಂಗವಾಗಿ ರಾಜ್ಯ ಮಟ್ಟದ ಟಗರಿನ ಕಾಳಗದ ಸ್ಪರ್ಧೆಗಳು ಸೋಮವಾರ ಅ. ೧೫ ರಂದು ಜರುಗಲಿದ್ದು, ಉದ್ಘಾಟಕರಾಗಿ ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸುವರು ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹಾಲಲ್ಲಿ ಟಗರಿನ ಕಾಳಗ, ಎರಡಲ್ಲಿ ಟಗರು, ನಾಲ್ಕಲ್ಲಿ ಟಗರು, ಆರಲ್ಲಿ ಟಗರಿನ ಕಾಳಗ …

Read More »

ನಾಯಕತ್ವ ಗುಣ ಬೆಳೆಸುವ ಘಟಕಗಳನ್ನು ಪ್ರಾರಂಬಿಸಿದಾಗ ಮಾತ್ರ ಸಾಧ್ಯವಾಗುವದು: ವಾಘ್ಮೋಡೆ

ಮೂಡಲಗಿ: ತಾಲೂಕಿನ ವೆಂಕಟಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಘಟಕದ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರೇಮಿಗಳಾದ ಸಂಗಪ್ಪ ನೀಲಪ್ಪಗೋಳ, ಪ್ರಕಾಶ ಪಾಟೀಲ, ಪ್ರಕಾಶ ಪೂಜೇರಿಯವರು ೭೫ ನೇ ಆಜಾದಿ ಕಾ ಅಮೃತ ಮಹೊತ್ಸವದ ಆಚರಣೆ ಅಂಗವಾಗಿ ಸಮವಸ್ತ್ರ ಗಳನ್ನು ಕೊಡುಗೆಯಾಗಿ ನೀಡಿದರು. ಪ್ರಧಾನಗುರು ಅಪ್ಪಣ್ಣ ವಾಘ್ಮೋಡೆ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಕೌಟ್ಸ ಮತ್ತು ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಮುಂತಾದ ನಾಯಕತ್ವ ಗುಣ ಬೆಳೆಸುವ ಘಟಕಗಳನ್ನು ಪ್ರಾರಂಬಿಸಿದಾಗ …

Read More »

ಹರ್ ಘರ್ ತಿರಂಗಾ ಕಾರ್ಯಕ್ರಮ ಯಶಸ್ವಿಗೊಳಿಸಿ: ರಾಜಶೇಖರ ಆಡೂರು

ಕೊಪ್ಪಳ: ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಗರಸಭೆಯ ಸದಸ್ಯರಾದ ರಾಜಶೇಖರ ಆಡೂರು ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಹಮ್ಮಿಕೊಂಡಿದ್ದ ಧ್ವಜ‌ ವಿತರಣಾ ಕಾರ್ಯಕ್ರಮದಲ್ಲಿ ಧ್ವಜ ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತಾ,ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ ವರ್ಷ ಕಳೆದಿದೆ ಈ ಸಮಯದಲ್ಲಿ ಸಮಾಜದಲ್ಲಿ ಇರುವ ಪ್ರತಿ ನಾಗರಿಕನಿಗೂ ಕೂಡಾ ದೇಶದ ಮೇಲೆ ಅಭಿಮಾನ ಮೂಡುವ ನಿಟ್ಟಿನಲ್ಲಿ …

Read More »

ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ತೋಟದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ

ಮೂಡಲಗಿ: ಒಂದು ವಾರದ ಹಿಂದೆ ಅಷ್ಟೇ ಬೆಳಗಾವಿ ನಗರ ಹಾಗೂ ಚಿಕ್ಕೋಡಿ ತಾಲೂಕಿನ ಯಡುರವಾಡಿಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು. ಆದರೆ ಈಗ ಮತ್ತೆ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ತೋಟದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಮಲಗಿದ್ದ ಎಮ್ಮೆ ಕರುವನ್ನು ಚಿರತೆ ಎತ್ತಿಕೊಂಡು ಹೋದ ಚಲನವಲನಗಳು ಸ್ಪಷ್ಟವಾಗಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೂಡಲಗಿ ಸಮೀಪದ ಧರ್ಮಟ್ಟಿ ಕೆನಾಲ್ …

Read More »

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆoದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …

Read More »

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಮೂಡಲಗಿಯಲ್ಲಿ ಭವ್ಯ ಸ್ವಾಗತ

ಮೂಡಲಗಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಮೂಡಲಗಿ ಪಟ್ಟಣದ ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಬುಧವಾರದಂದು ಭವ್ಯ ಸ್ವಾಗತ ಕೋರಲಾಯಿತು. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ರಥಕ್ಕೆ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಷಂಬಿ ಹಾಗೂ ಮೂಡಲಗಿ ಪುರಸಭೆಯ ಅಧ್ಯಕ್ಷ ಹನುಮಂತ ಗುಡ್ಲಮನಿ, ತಾಲೂಕಾ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ …

Read More »

ಮೊಹರಂ ಹಬ್ಬದ ಪ್ರಯುಕ್ತ ಕರ್ಬಲ್ ಮತ್ತು ರಿವಾಯತ್ ಪದಗಳು

ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ಮೊಹರಮ್ ಹಬ್ಬದ ಪ್ರಯುಕ್ತ ವಿವಿಧ ಜಾನಪದ ತಂಡಗಳಿoದ ಕರ್ಬಲ್ ಮತ್ತು ರಿವಾಯತ್ ಪದಗಳ ಹಾಗೂ ಭಜಂತ್ರಿ ಕಲಾವಿದರಿಂದ ಶಹನಾಯಿ ವಾದನ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ. ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ ಹಾಡುಗಳ ಸ್ಪರ್ದೆಯಲ್ಲಿ ಮೂಡಲಗಿಯ ಎರಡು ಹಾಗೂ ಹುಣಶ್ಯಾಳ ಗ್ರಾಮದ …

Read More »

ಬಿ.ವಿ.ಸೋನ್ವಾಲ್ಕರ್ ಶಾಲೆ ಕ್ಯಾಂಪಸ್‌ನಲ್ಲಿ ಹೊಸ ಹಾಸ್ಟೆಲ್ ಬ್ಲಾಕ್

ಮೂಡಲಗಿ: ಬಿ.ವಿ. ಸೋನ್ವಾಲ್ಕರ್ ಪಬ್ಲಿಕ್ ಸ್ಕೂಲ್ ತಮ್ಮ ಮೂಡಲಗಿ ಕ್ಯಾಂಪಸ್‌ನಲ್ಲಿ ಹೊಸ ಹಾಸ್ಟೆಲ್ ಬ್ಲಾಕ್ ಚಾಲನೆಗೊಂಡಿದೆ. ಟ್ರಸ್ಟಿ ವೀರಣ್ಣ ಹೊಸೂರು ಉದ್ಘಾಟಿಸಿದರು. ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಅವರು – “ನಮ್ಮ ಶಾಲೆಯ ಉದ್ದೇಶವು ನಮ್ಮ ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನಾ ಕೌಶಲ್ಯ, ಜಾಗತಿಕ ದೃಷ್ಟಿಕೋನಗಳನ್ನು ಬೆಳೆಸುವ ಮೂಲಕ ವೇಗವಾಗಿ ಬದಲಾಗುತ್ತಿರುವ ಜಗತ್ತನ್ನು ಸಿದ್ಧಪಡಿಸುವುದು ಮತ್ತು ಪ್ರೇರೇಪಿಸುವುದು. ಪ್ರಾಮಾಣಿಕತೆ, ನಿಷ್ಠೆ, ಪರಿಶ್ರಮ ಮತ್ತು ಸಹಾನುಭೂತಿಯಂತಹ ಪ್ರಮುಖ ಮೌಲ್ಯಗಳಿಗೆ ಗೌರವ. ಯಾವುದೇ ಹೆಸರಾಂತ ನಗರದ …

Read More »

‘ದಿ. ಮೂಡಲಗಿ ಕೋ.ಆಪರೇಟಿವ ಬ್ಯಾಂಕ್’ ಮೂಡಲಗಿಯ ಸಹಕಾರಿಯ ಸಿರಿ

ಮೂಡಲಗಿ: ದಿ. ಮೂಡಲಗಿ ಕೋ. ಆಪ್‌ರೇಟಿವ ಬ್ಯಾಂಕ್ ಲಿ. ಇದರ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶ್ರೀ ಮಹಾಲಕ್ಷ್ಮಿ ಶ್ರೀ ಮಹಾಸರಸ್ವತಿ ಪೂಜೆಯು ಆ. ೧೦ ಬುಧವಾರ ಬೆಳಿಗ್ಗೆ ೧೦ಕ್ಕೆ ಜರುಗಲಿದೆ. ಪೂಜಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಅರಭಾವಿಯ ಶ್ರೀ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಸ್ವಾಮೀಜಿ, ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ, ಭಾಗೋಜಿಕೊಪ್ಪದ ಡಾ. …

Read More »

You cannot copy content of this page