ಶನಿವಾರ , ಡಿಸೆಂಬರ್ 21 2024
kn
Breaking News

ಇಲ್ಲಿನ ಹತ್ತು ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ!

Spread the love

ಬೆಳಗಾವಿ: ಮಹಾಮಾರಿ ಕೊರೋನಾ ರೋಗದ ಹಿನ್ನಲೆಯಲ್ಲಿ ನಮ್ಮ ರಾಜ್ಯದಲ್ಲಿ ಇಂದಿನಿಂದ 3.0 ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದ ಲಾಕ್ ಡೌನ್ ನಲ್ಲಿ ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮಧ್ಯ ಮಾರಾಟಕ್ಕೆ ಅವಕಾಶ ನೀಡದೇ ಇರುವುದು ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಮಾಡಿದೆ.

ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶ, ಅಮನ್ ನಗರ, ಆಜಾದ್ ಗಲ್ಲಿ, ಸಂಗಮೇಶ್ವರ ನಗರ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಬೆಳಗುಂದಿ, ಪೀರನವಾಡಿ, ಯಳ್ಳೂರು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಮದ್ಯಮಾರಾಟವನ್ನು ನಿಷೇಧಿಸಿದ್ದು ಇಲ್ಲಿ ಎಣ್ಣೆ ಸಿಗಲ್ಲ.

ಈ 10 ಕಂಟೈನ್‍ಮೆಂಟ್ ಝೋನ್ ನಲ್ಲಿ ಮದ್ಯ ಮಾರಾಟ ಮಾಡಿದರೆ ಅಂಗಡಿಯ ಪರವಾನಗಿ ರದ್ದು ಮಾಡಲಾಗುತ್ತದೆ. ಆರೆಂಜ್ ಝೋನ್ ಬೆಳಗಾವಿಯಲ್ಲಿ ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ. 10 ಪ್ರದೇಶ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಬೆಳಗಾವಿ ತಾಲೂಕು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಮೂರು ತಾಲೂಕು ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page