ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಪ್ರಕಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇಂದು ಒಟ್ಟು 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದೆ.
ಇಂದು ಮಧ್ಯಾಹ್ನ ೧೨ ಘಂಟೆಯವರೆಗೆ ಆರೋಗ್ಯ ಇಲಾಖೆಯು ರಾಜ್ಯದಲ್ಲಿ 38 ಪ್ರಕರಣ ಪತ್ತೆಯಾಗಿವೆ ಎಂದು ಹೆಲ್ತ್ ಬುಲೆಟಿನ ಬಿಡುಗಡೆ ಮಾಡಿತ್ತು . ಆದರೆ ಸಂಜೆ ವೇಳೆಗೆ ಮತ್ತೆ 6 ಜನರಲ್ಲಿ ಹೊಸದಾಗಿ ಕೊರೊನ ಸೋಂಕು ಇರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 359ಕ್ಕೇರಿದೆ. ಈವರೆಗೆ 13 ಜನರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಘೋಷಿಸಿದ್ದರೂ ಕೂಡ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.