ಶುಕ್ರವಾರ , ಡಿಸೆಂಬರ್ 27 2024
kn
Breaking News

ಮೂಡಲಗಿ

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಬದಲಿ …

Read More »

ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಬಿ.ಸಿ‌.ನಾಗೇಶ

ಬೆಂಗಳೂರು:ವಿಕಲಚೇತನ ಶಿಕ್ಷಕರ ಅನೇಕ ಸಮಸ್ಯೆಗಳಿದ್ದು ಅವರ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಹೇಳಿದರು. ಅವರು ನಗರದ ತಮ್ಮ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ನೀಡಿದ ಮನವಿ ಹಾಗೂ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ,ವಿಕಲಚೇತನ ಶಿಕ್ಷಕರ ಸಮಸ್ಯೆಗಳು ಸೇರಿದಂತೆ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಒಳಗೊಂಡ ಮನವಿ ಪತ್ರವನ್ನು ವಿಕಲಚೇತನ ನೌಕರರ ಸಂಘದ ವತಿಯಿಂದ ನೀಡಿದ್ದಾರೆ.ಮನವಿಯಲ್ಲಿ ಇರುವ ಅಂಶಗಳು ನ್ಯಾಯಯುತವಾಗಿವೆ.ನಾನು ಕೂಡಾ ನೂತನವಾಗಿ …

Read More »

ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯಾವಶ್ಯಕವಾಗಿದೆ : ಸಮೀರಅಹ್ಮದ ದಬಾಡಿ

ಮೂಡಲಗಿ: ಸರಕಾರಿ ಮತ್ತು ಖಾಸಗಿ ಕಛೇರಿಗಳಲ್ಲಿ, ಶಾಲಾ ಆವರಣ, ದೈವತ್ವವಿರುವ ಕ್ಷೇತ್ರಗಳು, ಪರಿಸರದಲ್ಲಿ ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯಾವಶ್ಯಕವಾಗಿದೆ ಎಂದು ಮೂಡಲಗಿ ಸಮೂಹ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿ ಹೇಳಿದರು. ಅವರು ಪಟ್ಟಣದ ಸಮೂಹ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಸಸಿ ನೇಡುವ ಮೂಲಕ ಚಾಲನೆ ನೀಡಿದರು. ಕೊರೋನಾ ಹಾಗೂ ಆಕಾಲಿಕ ಮಳೆಯಿಂದಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಗಳು ಕುಂಠಿತವಾಗುತ್ತಿದೆ. ಬಿಡುವಿನ ಸಮಯದಲ್ಲಿ ಕಛೇರಿ ಸೌಂದರ್ಯ ಹಾಗೂ ಕಚೇರಿಯ ಮುಂದೆ …

Read More »

ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ

ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ ಸಮೀಕ್ಷೆ …

Read More »

ಸೋಷಿಯಲ್ ಮಿಡಿಯಾ ಸಿಂಗಂಗಳಿಗೆ ಡಿಜಿಪಿ ಸೂದ್ ಖಡಕ್ ವಾರ್ನಿಂಗ್ !

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಠಾಣೆ ಕೆಲಸ ಬಿಟ್ಟು ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಸಮಾರಂಭ ಮಾಡುವಂತಿಲ್ಲ. ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಯಾವ ಪೊಲೀಸ್ ಸಿಬ್ಬಂದಿಯೂ ಸಾರ್ವಜನಿಕ ಸಭೆಗಳಿಗೆ ಅತಿಥಿಗಳಾಗಿ ಹೋಗುವಂತಿಲ್ಲ. ಫೋಟೋ ಸೆಷನ್ ವಿಡಿಯೋ ಮಾಡುವಂತಿಲ್ಲ. ವೈಟ್ ಕಾಲರ್ ಕ್ರಿಮಿನಲ್‌ಗಳ ಜತೆ ಸಂಪರ್ಕ ಬೆಳೆಸಿ ಫೋಟೋ ತೆಗೆಸಿಕೊಳ್ಳುವಂತಿಲ್ಲ. ಫೇಸ್‌ಬುಕಲ್ಲಿ ಅಭಿಮಾನಿ ಸಂಘ ಕಟ್ಟಿಕೊಳ್ಳುವಂತಿಲ್ಲ. ಸಿಂಗಂ ಎಂದು ಬಿಂಬಿಸುವ ವಿಡಿಯೋ ಹಾಕುವಂತಿಲ್ಲ. ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ …

Read More »

ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿ ಅಥಣಿ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ರೈತರು

ಅಥಣಿ : ಪ್ರವಾಹ ಭೀತಿ ಎದುರಿಸುತ್ತಿರುವ ಕೃಷ್ಣಾ ನದಿ ತೀರದ ಜನರು ಪರಿಸ್ಥಿತಿ ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸಿಡಿದೆದ್ದ ರೈತ ಮುಖಂಡರು ಅಥಣಿ ತಾಲೂಕಿನ ಗ್ರಾಮಗಳಾದ ನದಿ ಇಂಗಳಗಾವ್, ದರೂರ್, ತೀರ್ಥ, ಸಪ್ತಸಾಗರ, ಕವಟಗೊಪ್ಪ, ಶೇಗುಣಸಿ ಸೇರಿದಂತೆ ಹಲವು ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದ್ದು ವಾಸಿಸಲು ಸೂರು ಇಲ್ಲದೆ ಮನೆ-ಮಠ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಜೀವನ ಸಾಕಾಗಿ ಹೋಗಿದೆ ನಮಗೆ ಶಾಶ್ವತ ಪರಿಹಾರ …

Read More »

ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್

ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

10 ದಿನಗಳೊಳಗೆ ಲೋಳಸೂರ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಬುಧವಾರದಂದು ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ ಸೇತುವೆ ಹಾಗೂ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ. ಕಳೆದ …

Read More »

ಖಾಸಗಿ ನರ್ಸರಿ ಶಾಲೆಗಳಿಗೆ ಅಂಗನವಾಡಿ ಕೇಂದ್ರಗಳು ಪೈಪೋಟಿ ನಿಡಬೇಕು-ಮನ್ನಿಕೇರಿ

. ಮೂಡಲಗಿ : ಖಾಸಗಿ ನರ್ಸರಿ ಶಾಲೆಗಳಿಗೆ ಪೈಪೋಟಿ ನೀಡಲು ಅಂಗನವಾಡಿ ಕೇಂದ್ರಗಳು ಸಹ ಸಕಲ ರೀತಿಯಲ್ಲಿ ಸಜ್ಜಾಗಬೇಕು ಎಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಸ್ಥಳೀಯ ಲಕ್ಷ್ಮೀನಗರದ 397ರ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಉದ್ಯಾನವನ ಉದ್ಘಾಟಿಸಿ ಮಾತನಾಡಿ, ಶಾಸಕರ, ಪುರಸಭೆ ಸದಸ್ಯರ, ಪಟ್ಟಣದ ದಾನಿಗಳ ಸಹಕಾರದೊಂದಿಗೆ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳನ್ನು ಆಕರ್ಷಿಸಸಲು ಉದ್ಯಾನವನ ಹಾಗೂ ಆಟಿಕೆ ಪರಿಕರಗಳ, ಗೋಡೆಯ ಮೇಲೆ ಬಣ್ಣದಿಂದ ಬೀಡಿಸಿದ …

Read More »

You cannot copy content of this page