ಭಾನುವಾರ , ಡಿಸೆಂಬರ್ 22 2024
kn
Breaking News

Recent Posts

ಹನುಮಂತಪ್ಪ ಕುರಿಗೆ ಶಿಕ್ಷಣ ಸಾರಥಿ ರಾಜ್ಯ ಮಟ್ಟದ ಪ್ರಶಸ್ತಿ

ಕೊಪ್ಪಳ: ಬಹದ್ದೂರಬಂಡಿ ಕ್ಲಸ್ಟರನ ಸಿ.ಆರ್.ಪಿ.ಹನುಮಂತಪ್ಪ ಕುರಿ ಅವರಿಗೆ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ವತಿಯಿಂದ ನೀಡಲಾಗುವ ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಶಾಲೆ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಸೇರಿಸುವ,ಕರೋನಾ ಜಾಗೃತಿ,ಮತದಾನ ಜಾಗೃತಿ ಕುರಿತಂತೆ ಸ್ವತ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ತಾನೇ ಹಾಡುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವುದನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶಿಕ್ಷಣ …

Read More »

ತುಮಕೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಎರಡು ಮೆಗಾ ಫುಡ್ ಪಾರ್ಕ್ಗಳನ್ನು ಅನುಮೋದಿಸಲಾಗಿದೆ : ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದಲ್ಲಿ ಆಹಾರ ಸಂಸ್ಕರಣೆ ವಲಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ರಾಜ್ಯದ ತುಮಕೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಎರಡು ಮೆಗಾ ಫುಡ್ ಪಾರ್ಕ್ಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ, ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಸ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮೆಗಾ ಫುಡ್ ಪಾರ್ಕ್ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ …

Read More »

ಕ್ರೀಡೆಗಳನ್ನು ಸವಾಲಾಗಿ ಪರಿಗಣಿಸದೆ ಉತ್ಸಾಹದಿಂದ ಭಾಗವಹಿಸಿ : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತಾಗಿದೆ. ಯಾವುದೇ ಕ್ಷೇತ್ರವಾಗಿರಲಿ ನಿರಂತರ ಮಾರ್ಗದರ್ಶನ ಸತತ ಪ್ರಯತ್ನ ಪಟ್ಟಾಗ ಮಾತ್ರ ಸಾಧಕರಾಗಿ ಉತ್ತುಂಗಕ್ಕೇರಬಹುದು. ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿ ದಿಸೆಯಿಂದಲೆ ಕ್ರೀಡೆಗಳನ್ನು ಸವಾಲಾಗಿ ಪರಿಗಣಿಸದೆ ಉತ್ಸಾಹದಿಂದ ಭಾಗವಹಿಸುವಿಕೆ ಮೂಲಕ ದೈಹಿಕವಾಗಿ ಸದೃಢರಾಗುವ ಮೂಲಕ ಮಾನಸಿಕ ಸದೃಢತೆ ಸಾಧಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಗುರುವಾರ ಪಟ್ಟಣದಲ್ಲಿಯ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ …

Read More »

ರಾಜ್ಯಸಭಾ ಸದಸ್ಯರಾಗಿ ಡಾ. ವಿರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ: ಸಂಸದ ಈರಣ್ಣ ಕಡಾಡಿ ಅಭಿನಂದನೆ

ಮೂಡಲಗಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿಯ ಹರಿಕಾರ ಪಧ್ಮ ವಿಭೂಷಣ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ ಭವನದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಶ್ರದ್ದಾಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಗುರುವಾರ ಜು.೨೧ ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಹೆಗ್ಗಡೆಯವರು ತಮ್ಮ ೨೦ ನೇ ವಯಸ್ಸಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ೨೧ ನೇ …

Read More »

“ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಸಮೀರಹ್ಮದ ದಬಾಡಿ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಹ್ಮದ ದಬಾಡಿ ಆಯ್ಕೆಯಾಗಿದ್ದಾರೆ. ಜು. ೨೪ ರಂದು ತುಮಕೂರಲ್ಲಿ ಜರುಗುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶೈಕ್ಷಣಿಕ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ಸಾಗುವ …

Read More »

ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದೆ: ಬೀರಪ್ಪ ಅಂಡಗಿ

ಕೊಪ್ಪಳ: ಕ್ರೀಡೆಯು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅಂಗವಾಗಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕೊಪ್ಪಳ ಪೂರ್ವ ಹಾಗೂ ಗಿಣಿಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ,ಕ್ರೀಡೆ ಎನ್ನುವುದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ.ಪ್ರತಿಯೊಬ್ಬರು ಕೂಡಾ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡವಾಗಿರಬೇಕಾದರೆ ಕ್ರೀಡೆಯ ಅಗತ್ಯವಿದೆ.ಕ್ರೀಡಾಕೂಟಗಳು ಮಕ್ಕಳಲ್ಲಿ ಇರುವ ವಿವಿಧ ಕ್ರೀಡೆಗಳ ಆಸಕ್ತಿಯನ್ನು ಗುರುತಿಸಲು ಸಹಾಯಕವಾಗುತ್ತದೆ.ಮಕ್ಕಳು ಪ್ರತಿದಿನ ತಮ್ಮ …

Read More »

ಪರಿಸರವನ್ನು ಕಾಳಜಿಯಿಂದ ನೋಡಬೇಕು ಅಂದಾಗ ಮಾತ್ರ ಸಕಲ ಜೀವ ರಾಶಿಗಳು ಬಾಳಿ ಬದುಕಲು ಸಾಧ್ಯ: ಜ್ಯೋತಿ ಪಾಟೀಲ

ಮೂಡಲಗಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪರಿಸರವನ್ನು ಕಾಳಜಿಯಿಂದ ನೋಡಬೇಕು ಅಂದಾಗ ಮಾತ್ರ ಸಕಲ ಜೀವ ರಾಶಿಗಳು ಬಾಳಿ ಬದುಕಲು ಸಾಧ್ಯ ಎಂದು ಮೂಡಲಗಿ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಪಟ್ಟಣದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಾಗೂ ಮೌಲಾನಾ ಅಬ್ದುಲ ಕಲಾಂ ಶಾಲಾವರಣದಲ್ಲಿ ಗೋಕಾಕನ ಸ್ಪಂದನ ಗೆಳೆಯರ ಬಳಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಸಸಿ ನೇಡುವ …

Read More »

ಹಡಪದ ಅಪ್ಪಣ್ಣನವರು ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹಡಪದ ಅಪ್ಪಣ್ಣನವರು ೧೨ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಸ್ಥಗಿತ

ಮೂಡಲಗಿ: ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಶುಕ್ರವಾರ ಜಾಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. …

Read More »

ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು : ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ಅನುಕೂಲಗಳೂ ಇರುವ ಆಸ್ಪತ್ರೆಗಳು ನಿರ್ಮಾಣವಾಗುತ್ತಿರುವದು ಶ್ಲಾಘಣೀಯ, ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ಶುಕ್ರವಾರ ಇಲ್ಲಿಯ ನಾಗಲಿಂಗ ನಗರದಲ್ಲಿ ಅಲ್ಲಮ ಪ್ರಭು ಪೌಂಡೇಶನ್‌ವತಿಯಿAದ ನೂತನವಾಗಿ ಪ್ರಾರಂಭಿಸಿರುವ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉಧ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ಎಲ್ಲರಿಗೂ …

Read More »

You cannot copy content of this page