ಕೇರೂರ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೇರೂರ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಆವರಣದಲ್ಲಿ, ವಿವಿಧ ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಭೆ ಉದ್ದೇಶಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ನಾಗರಿಕರಿಗೆ ಮಾಸ್ಕ್ ವಿತರಿಸಿ, ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು, ಅಗತ್ಯ ವಸ್ತುಗಳನ್ನು ನಿಮ್ಮ ನಿಮ್ಮ ಮನೆಗಳ ಸಮೀಪ ಗಾಡಿಗಳ ಮೂಲಕ ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಆದಷ್ಟು ಮನೆಯಲ್ಲೇ ಇರಿ ಸುರಕ್ಷಿತವಾಗಿರಿ. ಎಲ್ಲಾ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸಹಕಾರ ನೀಡಲು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀ ಸುಭಾಷ ಸಂಪಗಾವಿ, ಅಂಕಲಿ ಪಿ.ಎಸ್.ಐ ಎಂ.ಎಂ ತಹಶೀಲ್ದಾರ, ಸಿಡಿಪಿಓ ಶ್ರೀಮತಿ ದೀಪಾ ಕಾಳೆ, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು, ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು