ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಲಿಕವಾಡ, ಹಾಗೂ ಸದಲಗಾ ಪಟ್ಟಣಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಸಭೆ ನಡೆಸಿ, ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕೊರೋನಾ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸಲು ಕಾರ್ಯಕರ್ತರಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ, ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಕಾರ್ಯಕರ್ತೆಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ತಹಸೀಲ್ದಾರರಾದ ಶ್ರಿ ಸುಭಾಷ ಸಂಪಗಾವಿ, ಸದಲಗಾ ಪಿಎಸ್ಐ ಶ್ರೀ ಅನಿಲಕುಮಾರ ಕುಂಬಾರ, ಸದಲಗಾ ಪುರಸಭೆ ಮುಖ್ಯಾಧಿಕಾರಿ ಶ್ರೀ ವಿವೇಕ ಜೋಶಿ, ವೈದ್ಯಾಧಿಕಾರಿಗಳಾದ ಶ್ರೀ ಯಶೋಧಾ ಬಾಬಲೆ, ಗ್ರಾಮಲೆಕ್ಕಾಧಿಕಾರಿ ಶ್ರಿ ಎಂ. ಎ, ನಗರಾಳೆ, ಪುರಸಭೆ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಹಾಗು ಗಣ್ಯರು ಉಪಸ್ಥಿತರಿದ್ದರು.