ಗುರುವಾರ , ಜೂನ್ 8 2023
kn
Breaking News

ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ

Spread the love

ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು.
ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. ಸರ್ಕಾರ ಆದೇಶಿಸಿದ ನಿಯಮಗಳು, ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೇ ನಿಮ್ಮ ಜೀವಕ್ಕೆ ಯಾವುದೇ ಅಪಾಯವಿಲ್ಲ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸುವುದರೊಂದಿಗೆ ಸಾನಿಟೈಸರ್ ಬಳಕೆ ಅವಶ್ಯಕವೆಂದು ಹೇಳಿದರು.
ಆಶಾ-ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯವನ್ನು ಮಾಡಿ ಪ್ರತಿಯೊಬ್ಬರು ರ್ಯಾಪೀಡ್ ಟೆಸ್ಟ್ ಮಾಡಿಸಲು ಪ್ರೇರೆಪಿಸಬೇಕು. ಸೊಂಕಿತರು ಕಂಡು ಬಂದರೆ ಅರ್ಧ ಗಂಟೆಯೊಳಗೆ ತಮ್ಮ ಸಮೀಪದ ಕೊರೋನಾ ಕಾಳಜಿ ಕೇಂದ್ರಕ್ಕೆ ದಾಖಲಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸಿ ಡಾ. ಬಗಲಿ ಅವರು ಗ್ರಾಮದ ಒಂದೇ ಮನೆಯಲ್ಲಿ ನಾಲ್ವರಿಗೆ ಕೊರೋನಾ ಸೊಂಕು ದೃಢಪಟ್ಟು ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿರುವ ಸೊಂಕಿತರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಅವರ ಔಷಧೋಪಚಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಬಳೋಬಾಳ ಗ್ರಾಮದಲ್ಲಿ ಪರಿಸ್ಥಿತಿಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮೂಡಲಗಿ ತಹಶೀಲದಾರ ಡಾ. ಮೋಹನ ಭಸ್ಮೆ, ಡಾ. ಆರ್.ಎಸ್.ಬೆಣಚಿನಮರಡಿ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಎ.ಸಿ.ಮನ್ನಿಕೇರಿ, ಸಿಪಿಐಗಳಾದ ಶ್ರೀಶೈಲ ಬ್ಯಾಕೋಡ, ವೆಂಕಟೇಶ ಮುರನಾಳ, ಡಾ. ಎಸ್.ಪಿ.ಸಿಂಗ್ಯಾಗೋಳ ಸೇರಿದಂತೆ ಅನೇಕರು ಇದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page