ಬುಧವಾರ , ಅಕ್ಟೋಬರ್ 5 2022
kn
Breaking News

ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

.

ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಅವರು ಕೌಜಲಗಿ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಈ ಮಾಹಿತಿ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕೌಜಲಗಿ ಭಾಗದ ಬಹು ವರ್ಷಗಳ ಪ್ರಮುಖ ಬೇಡಿಕೆಯಾಗಿದ್ದ ಕಲ್ಮಡ್ಡಿ ಏತ ನೀರಾವರಿ ಯೋಜನೆ ಅನುಷ್ಠಾನವು ೧೬೧.೨೦ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ಈಗಾಗಲೇ ಪ್ರಾಯೋಗಿಕವಾಗಿ ಕಾಲುವೆಗಳಿಗೆ ನೀರನ್ನು ಹರಿಸಲಾಗುತ್ತಿದೆ. ಕೌಜಲಗಿ, ಗೋಸಬಾಳ, ಬಿಲಕುಂದಿ, ಮನ್ನಿಕೇರಿ, ಬಗರನಾಳ ಗ್ರಾಮಗಳ ಸುಮಾರು ೫೬೮೫ ಎಕರೆ ( ೨೩೦೦ ಹೆಕ್ಟೇರ್) ಪ್ರದೇಶಕ ನೀರಾವರಿ ಸೌಲಭ್ಯ ದೊರಕಲಿದೆ ಎಂದು ಹೇಳಿದರು.
ಹೊಲಗಾಲುವೆ ಕಾಮಗಾರಿ (ಎಫ್ಐಸಿ) ಗೆ ಈಗಾಗಲೇ ೩೨ ಕೋಟಿ ರೂ. ಗಳನ್ನು ನೀಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ೧೨೦ ಹೆಕ್ಟೇರ್ ಎತ್ತರದ ಪ್ರದೇಶಕ್ಕೆ ಹನಿ ನೀರಾವರಿ ಯೋಜನೆಯೂ ಸಹ ಒಳಗೊಂಡಿದೆ. ಎಲ್ಲಿ ನೀರು ಹರಿಯುವುದಿಲ್ಲವೋ ಅಂತಹ ಎತ್ತರದ ಪ್ರದೇಶದಲ್ಲಿ ಹನಿ ನೀರಾವರಿಯನ್ನು ಅಳವಡಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಹಣಕಾಸು ಇಲಾಖೆಯಿಂದ ಎಫ್ಐಸಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ತಳಕಟ್ನಾಳ ಗ್ರಾಮದ ಹತ್ತೀರ ಘಟಪ್ರಭಾ ನದಿ ತೀರದಲ್ಲಿ ಜಾಕ್ ವೆಲ್ ಮತ್ತು ಪಂಪ್ ಹೌಸ್ ಕಾಮಗಾರಿಯೂ ಸಹ ಪೂರ್ಣಗೊಂಡಿದೆ. ಎಪ್ರಿಲ್ ತಿಂಗಳಲ್ಲಿ ರೈತರ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸುವ ಮೂಲಕ ಕೌಜಲಗಿ ಭಾಗದ ರೈತಾಪಿ ವರ್ಗದವರಿಗೆ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಅರ್ಪಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಪ್ರಭಾ ಶುಗರ್ಸ್ ನಿರ್ದೇಶಕ ಎಂ.ಆರ್.ಭೋವಿ, ಜಿ.ಪಂ.ಮಾಜಿ ಸದಸ್ಯರಾದ ಆರ್.ವೈ.ಸಣ್ಣಕ್ಕಿ, ಪರಮೇಶ್ವರ ಹೊಸಮನಿ, ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಬಿ.ಲೋಕನ್ನವರ, ಪಿಕೆಪಿಎಸ್ ನಿರ್ದೇಶಕ ರವೀಂದ್ರ ಪರುಶೆಟ್ಟಿ, ಡಾ.ಡಿ.ಎಸ್.ನದಾಫ, ಮಾರುತಿ ಥರಕಾರ, ನೀಲಪ್ಪ ಕೇವಟಿ, ಜಿ.ಎಸ್. ಲೋಕನ್ನವರ, ಶಾಂತಪ್ಪ ಹಿರೇಮೇತ್ರಿ, ಅಶೋಕ ಹೊಸಮನಿ, ಹಾಸೀಮಸಾಬ ನಗಾರ್ಚಿ, ಡಿ.ಜೆ.ಮುಲ್ತಾನಿ, ಯಲ್ಲಪ್ಪ ದಾನನ್ನವರ, ಅಶೋಕ ಶಿವಾಪೂರ, ಕಲ್ಮಡ್ಡಿ ಭಾಗದ ಹಲವು ರೈತರು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

5 comments

  1. It’s hard to find knowledgeable people on this topic, but you sound like you know what you’re talking about! Thanks

  2. I have not checked in here for a while since I thought it was getting boring, but the last few posts are good quality so I guess I¦ll add you back to my everyday bloglist. You deserve it my friend 🙂

  3. Hey very nice website!! Man .. Excellent .. Amazing .. I’ll bookmark your web site and take the feeds also…I’m happy to find a lot of useful info here in the post, we need develop more strategies in this regard, thanks for sharing. . . . . .

  4. Glad to be one of the visitants on this awesome web site : D.

  5. Great website. Plenty of helpful information here. I?¦m sending it to a few friends ans also sharing in delicious. And certainly, thank you in your sweat!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!