ಶುಕ್ರವಾರ , ಏಪ್ರಿಲ್ 26 2024
kn
Breaking News

ಗುಣಾತ್ಮಕ ಕಾಮಗಾರಿಯನ್ನು ಮಾಡಿ : ಬಸವರಾಜ ಹೆಗ್ಗನಾಯಿಕ

Spread the love

ಗೋಕಾಕ: ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸಮುದಾಯದ ಜನರ ಅಭಿವೃದ್ಧಿಗಾಗಿ ಸರ್ಕಾರ ನಿಗದಿ ಪಡಿಸಿದ ಅನುದಾನವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಿಶೀಲನೆ ಮಾಡಿ ಗುಣಾತ್ಮಕ ಕಾಮಗಾರಿಯನ್ನು ಮಾಡಬೇಕೆಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು.
ಬುಧವಾರದಂದು ತಾಲೂಕಾ ಪಂಚಾಯತ ಸಭಾಭವನದಲ್ಲಿ ಎಸ್.ಸಿಪಿ ಮತ್ತು ಟಿಎಸ್ ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಎಸ್.ಸಿ ಮತ್ತು ಎಸ್.ಟಿ ಸಮುದಾಯದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವಾಗಿದೆ. ಸಮುದಾಯ ಭವನ, ಪಿಂಚಣಿ, ಸಾಲ ಸೌಲಭ್ಯ, ಉದ್ಯೋಗ, ಶೈಕ್ಷಣಿಕವಾಗಿ ಈ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕೆಲಸವಾಗಿದೆ. ಸರ್ಕಾರದಿಂದ ಬರುವ ಎಲ್ಲ ಸವಲತ್ತು ಒದಗಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾವುದೇ ಕಾಮಗಾರಿ ಇದ್ದರೂ ಮಾರ್ಚ ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಯಾವುದೇ ಅನುದಾನ ಸರ್ಕಾರಕ್ಕೆ ಮರಳಿ ಕಳಿಸುವಂತಹ ಕಾರ್ಯವಾಗಬಾರದು ಎಂದು ಸೂಚನೆ ನೀಡಿದರು. ಎಸ್.ಸಿ ಮತ್ತು ಎಸ್.ಟಿ ಸಮುದಾಯದವರು ಆರ್ಥಿಕ, ಸಮಾಜಿಕವಾಗಿ ಮುಂದೆ ಬರಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ದಿಗಾಗಿ ಹೆಚ್ಚಿನ ಒತ್ತು ನೀಡಬೇಕು ಎಂದರಲ್ಲದೇ ಮುಂದಿನ ಸಭೆಯಲ್ಲಿ ಆಯಾ ಇಲಾಖೆಯ ಮುಖ್ಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವಿ. ಕಲ್ಲಪ್ಪನವರ ಮಾತನಾಡಿ ವಿವಿಧ ಇಲಾಖೆಯಲ್ಲಿ ಎಸ್.ಸಿಪಿ ಮತ್ತು ಟಿಎಸ್ ಪಿ ಯೋಜನೆಯಡಿ ಹಲವಾರು ಕಾಮಗಾರಿಗಳು ಇದ್ದು ಅವುಗಳನ್ನು ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿ, ನಗರ ಮತ್ತು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.
ವೇದಿಕೆ ಮೇಲೆ ಎಸ್.ಸಿಎಸ್ ಪಿ ಮತ್ತು ಟಿಎಸ್ ಪಿ ಮೇಲ್ವಿಚಾರಣಾ ಸಮಿತಿ ಸದಸ್ಯರುಗಳಾದ ಸುಧೀರ ಜೋಡಟ್ಟಿ, ಯಲ್ಲಪ್ಪ ನಾಯಿಕ, ಮಹಾನಂದಾ ಬೆಳಗಲಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜಯಶ್ರೀ ಗೋಟೂರೆ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಉಪತಹಶೀಲ್ದಾರ ಎಲ್.ಎಚ್.ಭೋವಿ ಇದ್ದರು. ಸಭೆಯಲ್ಲಿ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page