ಶುಕ್ರವಾರ , ಮಾರ್ಚ್ 31 2023
kn
Breaking News

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

Spread the love

ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು ೫೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಮುದಾಯದ ಹಿತದೃಷ್ಟಿಯಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಉಪ್ಪಾರ ಸಮಾಜದವರ ಹೋರಾಟವನ್ನು ನಾವು ಬೆಂಬಲಿಸುತ್ತೇವೆ. ಕಳೆದ ಹಲವಾರು ವರ್ಷಗಳಿಂದ ಸಮಾಜ ಬಾಂಧವರು ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ನಡೆಸುತ್ತಲೇ ಬರುತ್ತಿದ್ದಾರೆ. ಜೊತೆಗೆ ಅರಭಾವಿ ಮತಕ್ಷೇತ್ರದಲ್ಲಿಯೂ ಈ ಸಮುದಾಯ ಅಧಿಕ ಸಂಖ್ಯೆಯಲ್ಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೇ ಇವರ ಜೊತೆಗೆ ಪರಿಶಿಷ್ಟ ಜಾತಿಯ ಮಾದಿಗ ಸಮಾಜದವರು ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆಯೂ ನಡೆಸುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೀಘ್ರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರ ಸಮಾಜಗಳ ಮೀಸಲಾತಿಗೆ ಹಾಗೂ ಮಾದಿಗ ಸಮಾಜದವರ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page