ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಮನವಿ ಮಾಡಿಕೊಂಡ ಅವರು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಕೋರೋನಾ ಬಗ್ಗೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
