.
ಕೊಪ್ಪಳ:ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಗೆ ಇವರ ಸಂಘಟನಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಹಾಗೂ ವಿಕಲಚೇತನ ವಿಭಾಗದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಿದ್ದಾರೆ.
ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ವೀರಶೈವ ಭವನದಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಬಿ.ಎನ್.ಹೊರಪೇಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
