ಶನಿವಾರ , ಡಿಸೆಂಬರ್ 21 2024
kn
Breaking News

ಸಭೆ ಆಯೋಜನೆ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮನವಿ ಪತ್ರ

Spread the love

ಕೊಪ್ಪಳ: ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಕುರಿತು ಪರಿಹಾರ ಕಂಡುಕೊಳ್ಳವ ನಿಟ್ಟಿನಲ್ಲಿ ಸಭೆಯನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರಿಗೆ ನಗರದ ಸಾಹಿತ್ಯ ಭವನದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಶಿಕ್ಷಕರ ವರ್ಗಾವಣೆ ಸಮಯದಲ್ಲಿ ವಿಕಲಚೇತನ ಶಿಕ್ಷಕರಿಗೆ ಅವರ ಅಂಗವೈಕಲ್ಯಯ ಕುರಿತು ವೈದ್ಯಕೀಯ ಪ್ರಮಾಣ ತರಲು ಪದೇ ಪದೇ ಸೂಚಿಸುವುದು,ಸೇವಾ ಅವಧಿಯಲ್ಲಿ ಒಂದು ಬಾರಿ ಮಾತ್ರ ಅಂಗವೈಕಲ್ಯ ಮೀಸಲಾತಿ ಅಡಿಯಲ್ಲಿ ವರ್ಗಾವಣೆ ಪಡೆಯಬೇಕು ಅಲ್ಲದೇ ವರ್ಗಾವಣೆಯನ್ನು ಪಡೆಯಬೇಕಾದರೆ ಸಾಮನ್ಯ ಶಿಕ್ಷಕರಂತೆ ಕನಿಷ್ಠ ವರ್ಷ ಸೇವೆ ಸಲ್ಲಿಸಬೇಕು ಎಂಬ ನಿಯಮಗಳು ಸೇರಿದಂತೆ ಅನೇಕ ಸಮಸ್ಯಗಳಿದ್ದು,ಇಂತಹ ಸಮಸ್ಯೆಗಳ ಕುರಿತು ಈಗಾಗಲೇ ಸಂಘದ ವತಿಯಿಂದ ಹಲವು ಬಾರಿ ಮನವಿ ಕೊಟ್ಟರು ಯಾವುದೇ ಪ್ರಯೋಜನ ಆಗಿರುವುದಿಲ್ಲ. ಆದ್ದರಿಂದ ತಾವು ತಮ್ಮ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜನೆ ಮಾಡುವ ಮೂಲಕ‌ ವಿಕಲಚೇತನ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವುದರ ಮೂಲಕ ಅನುಕೂಲ ಮಾಡಿಕೊಡಬೇಕಾಗಿ ಮನವಿ ಮಾಡಲಾಯಿತು.
ಮನವಿ ಸ್ವೀಕರಿಸಿದ ಬಳಿಕ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರು ಮಾತನಾಡುತ್ತಾ,ವಿಕಲಚೇತನ ಶಿಕ್ಷಕರ ಅನೇಕ ಸಮಸ್ಯೆ ಕುರಿತು ನನ್ನ ಗಮನಕ್ಕೆ ಬಂದಿದ್ದು,ಕೂಡಲೇ ಒಂದು ಅಧಿಕಾರಗಳ ಜೊತೆಯಲ್ಲಿ ಸಭೆಯನ್ನು ಆಯೋಜನೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯ ಖಜಾಂಚಿ ಮಂಜುನಾಥ ಹಿಂಡಿಹುಳಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಾಗಪ್ಪ ದೇವನಾಳ,ಕೊಪ್ಪಳ ತಾಲ್ಲೂಕು ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಸೇರಿದಂತೆ ಅನೇಕರು ಹಾಜರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page