ಕೊಪ್ಪಳ: ಸರಕಾರಿ ನೌಕರರ ಸಂಘದ ವತಿಯಿಂದ ಏ.೧೩ ರ ಬುಧವಾರ ಬೆಳಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ವಿಕಲಚೇತನ ನೌಕರರ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ ಎಂದು ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ.ಆರ್.ಜುಮ್ಮಣ್ಣನ್ನವರ ತಿಳಿಸಿದ್ದಾರೆ.
ಕಬ್ಬಡ್ಡಿ,ಓಟದ ಆಟ,ಕುರ್ಚಿ ಆಟ,ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ.
ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುವ ವಿಕಲಚೇತನ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಯನ್ನು ಸಂರ್ಪಕಿಸಲು ಕೋರಿದೆ.೯೮೪೫೬೦೯೩೬೨
