ಕುಡಚಿ: ಪಟ್ಟಣದಲ್ಲಿ ಕೋವಿಡ-19 ಸಂಬಂಧ ಸಮೀಕ್ಷೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸುವ ಸಂದರ್ಭದಲ್ಲಿ ಕೆಲವು ಜನ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದರು. ಇದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ತಪ್ಪಿತಸ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಯಿತು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿ ಕರ್ತವ್ಯ ನಿರ್ವಹಿವಂತೆ ಮನವಿ ಮಾಡಲಾಯಿತು.ಹಾಗೂ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕುಡಚಿ ಪಟ್ಟಣದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸಹಕಾರ ನೀಡುವಂತೆ ಸೂಚಿಸಿಲಾಯಿತು.
ಈ ಸಂದರ್ಭದಲ್ಲಿ ಶ್ರೀಮತಿ ಶಶಿಕಲಾ ಜೊಲ್ಲೆ -ಸಚಿವರು, ಶ್ರೀ ಅಣ್ಣಾಸಾಹೇಬ್ ಜೊಲ್ಲೆ-ಸಂಸದರು, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ಅಥಣಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎಸ್.ವಿ ಗಿರೀಶ್, ಅಂಗನವಾಡಿ ಅಧಿಕಾರಿ ಕುಡಚಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು