ಭಾನುವಾರ , ಡಿಸೆಂಬರ್ 22 2024
kn
Breaking News

ಕೊರೋನಾ ಎರಡನೆ ಅಲೆ ಭಯಂಕರವಾಗಿದೆ,ಪ್ರತಿಯೊಬ್ಬರೂ ಜಾಗೃತಿ ವಹಿಸಿ – ಹರ್ದಿ

Spread the love

ಮೂಡಲಗಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರು ಹೆಚ್ಚಾಗಿ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಕಳವಳ ವ್ಯಕ್ತಪಡಿಸಿದರು.

ಬುಧವಾರದಂದು ಇಲ್ಲಿಯ ಕಲ್ಮೇಶ್ವರ ವೃತ್ತದಲ್ಲಿ ಪುರಸಭೆ ಕಾರ್ಯಾಲಯ, ಪೋಲಿಸ ಠಾಣೆ, ಪತ್ರಕರ್ತರ ಬಳಗ ಹಾಗೂ ಸಮುದಾಯ ಆರೋಗ್ಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರದ ಮಾರ್ಗಸೂಚಿ, ಜನತಾ ಕಪ್ರ್ಯೂ ಪಾಲನೆ ಮಾಡದೆ ಇದ್ದಲ್ಲಿ ಸೋಂಕು ಹೆಚ್ಚಾಗಿ ಕೋವಿಡ್ ಹತೋಟಿ ಸಾಧ್ಯವಿಲ್ಲ ಆದ್ದರಿಂದ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ನಿಯಮ ಪಾಲನೆ ಮಾಡಿ ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಬೇಕು. ನೀವೂ ಜಾಗೃತರಾಗಿ ಬೇರೆಯವರಿಗೂ ಕೋವಿಡ್ ಜಾಗೃತಿ ಬಗ್ಗೆ ಮನವರಿಕೆಮಾಡಬೇಕು. ಅನಾವಶ್ಯಕವಾಗಿ ಹೊರಗೆ ಬರದೆ ಮನೆಯಲ್ಲೆ ಇರಿ ಅಗತ್ಯ ವಸ್ತುಗಳನ್ನು ಕೊಳ್ಳಲು ಸಮಯ ನಿಗದಿಪಡಿಸಲಾಗಿದೆ ಆ ಸಮಯದಲ್ಲೆ ಹೊಗೆ ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಮಾತ್ರ ಖರಿದಿಸಿ ಜವಾಬ್ದಾರಿಯಿಂದ ವರ್ತಿಸಿ, ಈಗ ನೀವು ಎಚ್ಚೆತ್ತುಕೊಳ್ಳದಿದ್ದರೆ ಕಠಿನ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಪಿಎಸ್‍ಐ ಎಚ್ ವಾಯ್ ಬಾಲದಂಡಿ ಮಾತನಾಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕೊರೋನಾ ನಿಯಮ ಪಾಲನೆಯೇ ಸುರಕ್ಷಾ ಮಂತ್ರವಾಗಿದೆ ಸಾರ್ವಜನಿಕರ ಬೇಕಾಬಿಟ್ಟಿ ವರ್ತನೆಯಿಂದ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿದೆ ಹಲವಾರು ಬಾರಿ ನಾನಾ ತರಹದ ಜಾಗೃತಿ ಮೂಡಿಸಿದರೂ ಜನ ಎಚ್ಚೆತ್ತುಕೊಳ್ಳದೆ ಅಪಾಯಕ್ಕೆ ಆವ್ಹಾನ ನೀಡುತ್ತಿದ್ದಾರೆ. ಅನಗತ್ಯವಾಗಿ ಸಾರ್ವಜನಿಕರು ಹೊರಗಡೆ ಬರದೆ ನಿಮ್ಮ ಜೀವದ ಜೊತೆಗೆ ನಿಮ್ಮ ಕುಟುಂಬದ ರಕ್ಷಣೆ ಮಾಡಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿ ಇನ್ನಾದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ದಂಡವಿಧಿಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಜಾಗೃತಿ ಜಾಥಾದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ,ಕಿರಿಯ ಆರೋಗ್ಯ ನಿರೀಕ್ಷಕ ಪ್ರೀತಮ ಬೋವಿ, ಪಾಂಡು ಬಂಗೆನ್ನವರ, ರಮೇಶ ಆಲಗೂರ, ರಮೇಶ ಸಣ್ಣಕ್ಕಿ, ನಿರಂಜನ ಬುರುಡ, ಶಿಕ್ಷಕ ಬಿ ಆಯ್ ಡಾಂಗೆ, ಲಕ್ಷ್ಮಣ ಅಡಿಹುಡಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ ಹಾಗೂ ಪ್ರತಕರ್ತರು ಭಾಗವಹಿಸಿದ್ದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page