ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
