ಶುಕ್ರವಾರ , ಮಾರ್ಚ್ 29 2024
kn
Breaking News

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ

Spread the love

ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.
ಶನಿವಾರ ಫೆ-೦೫ ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಇಬ್ರಾಹಿಂ ಸುತಾರ್ ಸಂತರ ವಚನ ಹಾಗೂ ಸೂಫಿ ಸಂತರ ಪರಂಪರೆಯ ಆಶೆೆಗಳ ಹದಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ, ಹಿಂದು-ಮುಸ್ಲಿA ಸಮುದಾಯಗಳ ನಡುವೆ ಭಾವೈಕ್ಯತೆಯ ಕೊಂಡಿಯಾಗಿದ್ದರು. ನಮ್ಮ ಪಕ್ಕದ ಮಹಾಲಿಂಗಪೂರದಲ್ಲಿ ಜನಿಸಿದ ಇಬ್ರಾಹಿಂ ಸುತಾರ್ ಅವರ ಪ್ರವಚನಗಳನ್ನು ನಾನು ಕೂಡಾ ಬಾಲ್ಯದಿಂದಲೇ ಕೇಳುವ ಹಾಗೂ ಹಲವಾರು ಕಾರ್ಯಕ್ರಮಗಳಲ್ಲಿ ಅವರೊಂದಿಗೆ ಭಾಗವಹಿಸಿದ ಸಂದರ್ಭಗಳನ್ನು ಸ್ಮರಿಸಿದರು. ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ಸಂತನನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.


Spread the love

About gcsteam

Check Also

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ

Spread the loveಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page