ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.
ರವಿವಾರ ಫೆ-೦೬ ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಲತಾ ಮಂಗೇಶ್ಕರ್ ಅವರು ಭಾರತದ ನೈಟಿಂಗೇಲ್ (ಗಾನ ಕೋಗಿಲೆ) ಎಂದು ಕರೆಯಲ್ಪಡುವ ಅವರು ಭಾರತ ರತ್ನ ಪ್ರಶಸ್ತಿ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮಭೂಷಣ, ಪದ್ಮವಿಭೂಷಣ, ಮೂರು ಬಾರಿ ರಾಷ್ಟಿçÃಯ ಪ್ರಶಸ್ತಿ, ನಾಲ್ಕು ಬಾರಿ ಫಿಲ್ಮ್ಫೇರ್ ಪ್ರಶಸ್ತಿ, ಎರಡು ಬಾರಿ ಫಿಲ್ಮ್ಫೇರ್ ಸ್ಪೆಷಲ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ ಎಂದರು.
ಲತಾ ಮಂಗೇಶ್ಕರ್ ಹಾಡಿರುವ ಸಾವಿರಾರು ಹಾಡುಗಳು, ಹಲವು ತಲೆಮಾರುಗಳ ಶ್ರೋತೃಗಳನ್ನು ತಲುಪಿದೆ. ದೇಶದ ವಿವಿಧ ಸ್ಥಳೀಯ ಭಾಷೆಗಳಲ್ಲಿ ಸಹಸ್ರಾರು ಸಿನಿಮಾ ಗೀತೆಗಳನ್ನು ಹಾಡಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಅವರ ನಿಧನದಿಂದ ಭಾರತೀಯ ಸಂಗೀತ ಲೋಕದ ಮಹಾನ್ ಕೊಂಡಿಯೊಂದು ಕಳಚಿದೆ ಎಂದು ಸಂತಾಪ ವ್ಯಕ್ತಪಡಿಸಿದರು.
Check Also
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
Spread the loveಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ …