ಬುಧವಾರ , ಅಕ್ಟೋಬರ್ 9 2024
kn
Breaking News

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

Spread the love

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳದಿಂದ ವೆಂಕಟರಾವ್ ನಾಡಗೌಡ, ಹರಿಯಾಣ ಸಹಕಾರ ಹೈನು ಅಭಿವೃದ್ಧಿ ಮಹಾಮಂಡಳದಿಂದ ರಣಧೀರಸಿಂಗ್ ಮತ್ತು ಕೇರಳ ರಾಜ್ಯ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಕೆ.ಎಸ್. ಮಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಸಜ್ಜಲ್ ಬಿಸ್ವಾಸ್ ಅವರು ಪ್ರಕಟಿಸಿದ್ದಾರೆ.
ಕರ್ನಾಟಕದಿಂದ ರಾಷ್ಟೀಯ ಸಹಕಾರ ಡೈರಿ ಅಭಿವೃದ್ಧಿ ಮಹಾಮಂಡಳಿಯ ಆಡಳಿತ ಮಂಡಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಎನ್‌ಸಿಡಿಎಫ್‌ಐ ಅಧ್ಯಕ್ಷ ಮಂಗಲ್‌ಜೀತ್ ರಾಯ್ ಹಾಗೂ ಎನ್‌ಡಿಡಿಬಿ ಅಧ್ಯಕ್ಷ ಮನೀಷ್ ಶಾ ಅವರು ಅಭಿನಂದಿಸಿದ್ದಾರೆ.
ಎನ್‌ಸಿಡಿಎಫ್‌ಐ ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿದ್ದು, ಈ ಸಂಸ್ಥೆಯು ದೇಶದ ಎಲ್ಲ ಸಹಕಾರ ಒಕ್ಕೂಟಗಳು, ಮಹಾಮಂಡಳಗಳು, ಭಾರತ ಸರ್ಕಾರದ ರಕ್ಷಣಾ ಇಲಾಖೆಗೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲು ಅನುಕೂಲವಾಗುವಂತೆ ಸಮನ್ವಯ ಕೆಲಸಗಳನ್ನು ನಿರ್ವಹಿಸುತ್ತಿದೆ. ಇತ್ತೀಚೆಗೆ ೨೦೧೬ ರಿಂದ ದೇಶದ ಎಲ್ಲ ಸಹಕಾರ ಒಕ್ಕೂಟಗಳು, ಮಹಾಮಂಡಳಗಳು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಆನ್‌ಲೈನ್ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಿದ್ದು, ಉತ್ತಮ ದರಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಡುತ್ತಿದೆ.
ಎನ್‌ಸಿಡಿಎಫ್‌ಐ ಬಾಂಬೆ ಕೋ-ಆಫ್ ಸೋಸೈಟಿ ೧೯೭೦ ರಲ್ಲಿ ನೋಂದಾಯಿತವಾದ ಒಂದು ರಾಷ್ಟೀಯ ಮಟ್ಟದ ಸಹಕಾರಿ ಸಂಸ್ಥೆಯಾಗಿದೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page