ಗುರುವಾರ , ನವೆಂಬರ್ 21 2024
kn
Breaking News

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

Spread the love

ಮೂಡಲಗಿ : ಇಂದಿನಿಂದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ ೨೫ ರಿಂದ ಎಪ್ರೀಲ್ ೧೧ ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ ಹಾರೂಗೇರಿಯ ಸಿದ್ಧೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ನಿನ್ನೆ ಸೋಮವಾರದಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ವಿದ್ಯಾರ್ಥಿಗಳ ಭಾವನೆಗಳನ್ನು ಅರಿತು ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಉಪ ಕುಲಪತಿ ಎಂ. ರಾಮಚಂದ್ರೆಗೌಡರೊಂದಿಗೆ ನಡೆಸಿದ ದೂರವಾಣಿ ಮೂಲಕ ನಡೆಸಿದ ಚರ್ಚೆಯಿಂದಾಗಿ ಪರೀಕ್ಷಾ ಕೇಂದ್ರದ ಸಮಸ್ಯೆ ಇತ್ಯರ್ಥವಾಗಿದ್ದು, ಹಾರೂಗೇರಿ ಕಾಲೇಜಿನ ಬದಲಾಗಿ ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೇ ಪರೀಕ್ಷೆಗಳು ಜರುಗಲಿವೆ.
ಇಂದು ಮಂಗಳವಾರ ಮತ್ತು ಬುಧವಾರದಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮಾರ್ಚ ೨೫ ರಿಂದ ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ಉಪ ಕುಲಪತಿಗಳು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಮೂಡಲಗಿ ಎಂಇಎಸ್ ಕಾಲೇಜಿನಲ್ಲಿ ಓದುತ್ತಿರುವ ೪೮೧ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂಡಲಗಿಯಲ್ಲಿಯೇ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಡೆಸ್ಕ್ಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಿಗೆ ಸಿ.ಸಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಪಟ್ಟಣದ ಅರಭಾವಿ ಶಾಸಕರ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ತಹಶೀಲ್ದಾರ ಡಿ.ಜೆ. ಮಹಾತ್, ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವೀಂದ್ರ ಸೋನವಾಲ್ಕರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್.ಡಿ. ಗಾಣಿಗೇರ, ಎಂಇಎಸ್ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಎ. ಶಾಸ್ತಿçಮಠ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬೆಳಗಾವಿ ಎಬಿವ್ಹಿಪಿ ವಿಭಾಗದ ಸಹಸಂಚಾಲಕ ಮಲ್ಲಿಕಾರ್ಜುನ ಮುಕ್ಕುಂದ, ಬಸವರಾಜ ಜೋಡಟ್ಟಿ ಹಾಗೂ ವಿವಿಧ ಕಾಲೇಜುಗಳ ಪ್ರಮುಖರು ಉಪಸ್ಥಿತರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page