ಶುಕ್ರವಾರ , ಮಾರ್ಚ್ 29 2024
kn
Breaking News

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿ ರಾಜ್ಯದಲ್ಲಿ ೧೩,೨೦೦ ಉದ್ಯೋಗ ಸೃಷ್ಠಿ- ಸಂಸದ ಈರಣ್ಣ ಕಡಾಡಿ

Spread the love

ಮೂಡಲಗಿ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಒಂದು ಪ್ರಮುಖ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಸಹಾಯ ಮಾಡುವ ಮೂಲಕ ಕೃಷಿಯೇತರ ವಲಯದಲ್ಲಿ ಸೂಕ್ಷ್ಮ ಉದ್ಯಮಗಳ ಸ್ಥಾಪನೆಯ ಮೂಲಕ ಸ್ವಯಂ-ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ರಾಜ್ಯಸಭಾ ಸಂಸತ್ತಿನ ಬಜೆಟ್ ಅಧಿವೇಶನಲ್ಲಿ ಕರ್ನಾಟಕದಲ್ಲಿ ಮಹಿಳಾ ಕೇಂದ್ರಿತ ಉದ್ಯಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ೨೦೨೧-೨೨ನೇ ಸಾಲಿನಲ್ಲಿ ೧೬೫೦ ಯೋಜನೆಗಳಲ್ಲಿ ೧೩,೨೦೦ ಉದ್ಯೋಗ ಸೃಷ್ಠಿಸಲಾಗಿದೆ ಎಂದು ತಿಳಿಸಿದ ಸಚಿವರು,. ದೇಶದಲ್ಲಿ ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ, ಉಪಕರಣ ಕೊಠಡಿ ಮತ್ತು ತಂತ್ರಜ್ಞಾನ ಕೇಂದ್ರಗಳು, ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆಗಾಗಿ ನಿಧಿಯ ಯೋಜನೆ, ಸಂಗ್ರಹಣೆ ಮತ್ತು ಮಾರುಕಟ್ಟೆ ಬೆಂಬಲ ಯೋಜನೆ, ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಇತ್ಯಾದಿ ಯೋಜನೆಗಳನ್ನು ಜಾರಿಗೊಳಿಸುತ್ತದೆ ಎಂದರು.
ಸಾರ್ವಜನಿಕ ವಲಯದ ಉದ್ಯಮಗಳು ತಮ್ಮ ವಾರ್ಷಿಕ ಸಂಗ್ರಹಣೆಯಲ್ಲಿ ಕನಿಷ್ಠ ಶೇ ೩% ರಷ್ಟು ಮಹಿಳಾ ಮಾಲೀಕತ್ವದ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಂದ ಸಂಗ್ರಹಿಸಬೇಕು ಎಂದು ಸರ್ಕಾರವು ಕಡ್ಡಾಯಗೊಳಿಸಿದೆ. ೨೦೨೧-೨೨ರಲ್ಲಿ ಮಹಿಳಾ ಕ್ವಾಯರ ಯೋಜನೆಯಡಿ ಒಟ್ಟು ೨,೩೩೧ ಫಲಾನುಭವಿಗಳು, ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿ ಒಟ್ಟು ೮೬,೩೮೦ ರಲ್ಲಿ ೩೨,೮೮೩ ಫಲಾನುಭವಿಗಳು ಹಾಗೂ ಸಾರ್ವಜನಿಕ ಸಂಗ್ರಹಣೆ ನೀತಿ ಒಟ್ಟು ೧,೭೩,೮೫೬ ರಲ್ಲಿ ೭,೭೩೫ ಫಲಾನುಭವಿಗಳನ್ನು ಗುರುತಿಸಲಾಗದೆ ಎಂದು ಮಾನ್ಯ ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page