ಶನಿವಾರ , ಡಿಸೆಂಬರ್ 21 2024
kn
Breaking News

ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ

Spread the love

ಮೂಡಲಗಿ: ಇಲ್ಲಿನ ಈರಣ್ಣ ನಗರದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು ೨೦ ಗಿಡ ನೆಟ್ಟು ವಿಭಿನ್ನವಾಗಿ ಕಾರ್ಮಿಕ ದಿನಾಚರಣೆ ಆಚರಿಸಿದರು
ಶಿಕ್ಷಣ ಸಂಯೋಜಕ ಕರಿಬಸವರಾಜ ಅವರು ಸಸಿಗೆ ನೀರು ಉಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತನಂತೆ ನಿತ್ಯ ಶ್ರಮಪಡುವ ಕಾರ್ಮಿಕರ ಸೇವೆ ಅನನ್ಯವಾಗಿದೆ.ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ೫ಬಡ ನಿರ್ಗತಿಕ ಕಾರ್ಮಿಕರ ಮಕ್ಕಳಿಗೆ ೧೦ನೇ ತರಗತಿಯವರಿಗೆ ಉಚಿತ ಶಿಕ್ಷಣ ಒದಗಿಸುವುದಾಗಿ ಹೇಳಿದ್ದಾರೆ ಅದರಂತೆ ನಾನು ಕೂಡಾ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ ಉಚಿತ ಶಿಕ್ಷಣ ಪಡೆಯಲಿಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನಿರೂಪಿಸಿ,ವಂದಿಸಿದರು.
ಈ ಸಂದರ್ಭದಲ್ಲಿ ಯಲ್ಲಪ್ಪ ಮಾನಕಪ್ಪಗೋಳ,ಯಲ್ಲಪ್ಪ ಸಣ್ಣಕ್ಕಿ, ಸುರೇಶ ಸಣ್ಣಕ್ಕಿ, ಶಕೀಲ ಪೀರಜಾದೆ, ಪ್ರಭು ತೇರದಾಳ, ರಮೇಶ ಎಸ್ ಸಣ್ಣಕ್ಕಿ, ಅರುಣ ಮಾನಕಪ್ಪಗೋಳ,ಶಾಲವ್ವ ಮಾನಕಪ್ಪಗೋಳ, ಸಾಂವಕ್ಕ ಖವಟಕೊಪ್ಪ ಸಾಂವಕ್ಕ ಹರಿಜನ, ಲಕ್ಕವ್ವ ಗಸ್ತಿ, ರೇಣವ್ವ ವರ್ಗಿ ಮತ್ತಿತರರು ಇದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page