ಬುಧವಾರ , ಏಪ್ರಿಲ್ 24 2024
kn
Breaking News

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮತ್ತೇ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ

Spread the love

ಮೂಡಲಗಿ : ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ‍್ಯಾಂಕ್ ಗಳಿಸಿದ್ದು, ಶೇ ೯೩.೭೦ ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ ಅಭಿನಂದನೆ ಸಲ್ಲಿಸಿರುವ ಅವರು, ಉತ್ತಮ ಫಲಿತಾಂಶಕ್ಕೆ ಶ್ರಮಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮತ್ತು ಶಿಕ್ಷಕ ಬಳಗ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸದಾ ಪ್ರೋತ್ಸಾಹಿಸುತ್ತಿರುವ ಪಾಲಕ-ಪೋಷಕರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page