ಭಾನುವಾರ , ಡಿಸೆಂಬರ್ 22 2024
kn
Breaking News

ಎಸ್ಸಿ,ಎಸ್ಟಿ ಸಮುದಾಯದ ಮಿಸಲು ಹೆಚ್ಚಳಕ್ಕೆ ಆಗ್ರಹಿಸಿ ಮನವಿ

Spread the love

ಮೂಡಲಗಿ: ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡಗಳ ಮಿಸಲಾತಿ ಪ್ರಮಾಣ ಹೆಚ್ಚಳ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್‌ದಾಸ್ ಏಕ ಸದಸ್ಯ ಸಮಿತಿ ವರದಿ ಸಲ್ಲಿಸಿದ್ದು ಅದರ ಅನುಷ್ಟಾನಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮಿಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲೂಕಾ ಘಟಕದ ಪದಾಧಿಕಾಗಳು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ ಎರಡು ವರ್ಷಗಳಾದರೂ ಅಗತ್ಯ ಕ್ರಮ ಕೈಗೊಂಡಿಲ್ಲ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಕಳೆದ ೧೦೦ ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಮಿಸಲು ಜಾರಿಗೊಳಿಸಬೇಕೆಂದು ಮಾಡುತ್ತಿರುವ ಸತ್ಯಾಗ್ರಹಕ್ಕೆ ಕೂಡ ಸರ್ಕಾರ ಸ್ಪಂದಿಸುತ್ತಿಲ್ಲ. ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ಮೇಲೆ ಹಾಗೂ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ಪರಿಶಿಷ್ಟ ಜಾತಿಗೆ ಶೇ.೧೫ರಿಂದ ೧೭ಕ್ಕೆ, ಪರಿಶಿಷ್ಟ ಪಂಗಡಕ್ಕೆ ಶೇ.೩ರಿಂದ ೭.೫ರಷ್ಟು ಮಿಸಲಾತಿ ಹೆಚ್ಚಿಸಬೇಕು. ಶೈಕ್ಷಣಿಕವಾಗಿ, ಸರಕಾರದ ನೇಮಕಾತಿ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ಆಯೋಗದ ವರದಿಯನ್ನು ಕೊಡಲೇ ಜಾರಿ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅರಭಾವಿ ಬ್ಲಾಕ್ ಎಸ್ ಟಿ ಯುವ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಪುರಸಭೆ ಸದಸ್ಯ ಆನಂದ ಟಪಾಲದಾರ, ಚಂದ್ರಕಾಂತ ಪೂಜೇರಿ, ಪುಂಡಲೀಕ ಹೊಸಟ್ಟಿ, ಸಂತೋಷ ಕದಂ, ಮಾರುತಿ ಜಂಗಪ್ಪಗೋಳ, ಮಲ್ಲಪ್ಪ ದಳವಾಯಿ, ಬಿ ಎಚ್ ಹುಲ್ಯಾಳ, ಉದ್ದಪ್ಪ ಗುಡದಾರ, ರಾಜರತ್ನ ಹಂಚಿನಾಳ, ಅಶೋಕ ಮಾದರ ಇದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page