ಬುಧವಾರ , ಡಿಸೆಂಬರ್ 11 2024
kn
Breaking News

೭೫ ಗಂಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳೊಂದಿಗೆ ಸಂಪರ್ಕ ಸಾಧಿಸಲು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ

Spread the love

ಮೂಡಲಗಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೫ ವರ್ಷ ಗತಿಸಿದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ೭೫ ಗಂಟೆಗಳ ಕಾಲ ಸರ್ಕಾರದ ಯೋಜನೆಯ ಫಲಾನುಭವಿಗಳೊಂದಿಗೆ ಸಂಪರ್ಕ ಸಾಧಿಸಲು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕರೆ ನೀಡಿದರು.
ಮೇ ೩೧ ರಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಗಳೊಂದಿಗೆ ನಡೆಸಿದ ನೇರ ಸಂವಾದ ಕಾರ್ಯಕ್ರಮವನ್ನು ರೈತರೊಂದಿಗೆ ವೀಕ್ಷಿಸಿ, ನಂತರ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ೩೦ ವರ್ಷಗಳ ನಂತರ ೨೦೧೪ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಒಂದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದ ಅಭಿವೃದ್ದಿ ಗತಿ ಬದಲಾವಣೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಆರ್ಥಿಕ ಪರಿಸ್ಥಿತಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕೋವಿಡ್‌ನಂತಹ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿಯೂ ಕೂಡಾ ದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಮತ್ತು ಆಹಾರ ಈ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಅವರನ್ನು ಕೊಂಡಾಡಿದರು.
೮ ವರ್ಷಗಳ ಅವಧಿಯಲ್ಲಿ ಮೋದಿ ಅವರು ರೈತ ಪರವಾಗಿ ವಿಶೇಷವಾದಂತಹ ಕಳಕಳಿಯನ್ನು ಹೊಂದಿದ್ದು, ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಂದು ದೇಶದ ೧೦ ಕೋಟಿಗೂ ಅಧಿಕ ರೈತ ಬಂಧುಗಳಿಗೆ ರೂ. ೨೧.೦೦೦ ಸಾವಿರ ಕೋಟಿ ರೂ. ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದರು.
ಬಸವರಾಜ ಕಡಾಡಿ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಪದಾಧಿಕಾರಿಗಳಾದ ಶ್ರೀಕಾಂತ ಕೌಜಲಗಿ, ಸುರೇಶ ಮಠಪತಿ, ಶ್ರೀಶೈಲ ಪೂಜೇರಿ, ಅಡಿವೆಪ್ಪ ಕುರಬೇಟ, ದುಂಡಪ್ಪ ನಿಂಗನ್ನವರ, ಭೀಮಶಿ ಬಂಗಾರಿ, ಅಶೋಕ ಶಿವಾಪೂರ, ಬಸವರಾಜ ಗಾಡವಿ, ಮಂಗಲಾ ಕೌಜಲಗಿ, ಕಮಲಾ ಬಡಗಾಂವಿ, ಶ್ರೀಶೈಲ ತುಪ್ಪದ, ಶಿವಗೊಂಡ ವ್ಯಾಪಾರಿ, ಸಹದೇವ ಹೆಬ್ಬಾಳ, ಪರಪ್ಪ ಮಳವಾಡ, ಈರಣ್ಣ ಮುನ್ನೋಳಿಮಠ, ಶಿವಪ್ಪ ಬಿ.ಪಾಟೀಲ, ಸೇರಿದಂತೆ ರೈತ ಮೋರ್ಚಾ ಪದಾಧಿಕಾರಿಗಳು, ರೈತರು, ಕೃಷಿ ಕಾರ್ಮಿಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page