ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ
ಮಹಾಲಕ್ಷ್ಮೀ ತಳವಾರ ಮರು ಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ
ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಅರಭಾಂವಿ ಕ್ಷೇತ್ರದ ಶೈಕ್ಷಣಿಕ
ಸಾಧನೆಯನ್ನು ರಾಜ್ಯಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾಳೆಂದು ಕಹಾಮ ಅಧ್ಯಕ್ಷ, ಶಾಸಕ
ಬಾಲಚಂದ್ರ ಜಾರಕಿಹೊಳಿ ಹರ್ಷವ್ಯಕ್ತಪಡಿಸಿದ್ದಾರೆ.
ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದೆ.
ಗುಣಾತ್ಮಕ
ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಹಾಗೂ
ಸದ್ಯ 625 ಕ್ಕೆ 625 ಅಂಕ ಪಡೆಯುವ ಮೂಲಕ ಸಾಭಿತಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ
ಬಿಇಒ ಅಜಿತ ಮನ್ನಿಕೇರಿ, ಮುಖ್ಯೋಪಾಧ್ಯಾಯ ಸುಭಾಸ ವಲ್ಯಾಪೂರ, ಎಸ್.ಡಿ.ಎಮ್.ಸಿ
ಪದಾಧಿಕಾರಿಗಳು, ಶಿಕ್ಷಕ ಸಿಬ್ಬಂದಿ, ಶಿಕ್ಷಣ ಪ್ರೇಮಿಗಳು, ಪಾಲಕ ಪೋಷಕರ ಹಾಗೂ ಗ್ರಾಮಸ್ಥರ
ಶೈಕ್ಷಣಿಕ ಕಾಳಜಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Check Also
ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ
Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …