ಗುರುವಾರ , ಡಿಸೆಂಬರ್ 12 2024
kn
Breaking News

ಜುಲೈ 13 ರಂದು ಕಾಗಿನೆಲೆಯಲ್ಲಿ ಪುಣ್ಯಾರಾಧನೆ, ಗುರುವಂದನ ಮಹೋತ್ಸವ : ಡಾ. ರಾಜೇಂದ್ರ ಸಣ್ಣಕ್ಕಿ

Spread the love

ಮೂಡಲಗಿ: ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ ೧೬ ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ಶ್ರೀಶ್ರೀಶ್ರೀ ನಿರಂಜನಾನoದಪುರಿ ಮಹಾಸ್ವಾಜಿಗಳ ಗುರುವಂದನಾ ಮಹೋತ್ಸವವು ಜುಲೈ ೧೩ ರಂದು ಕಾಗಿನೆಲೆಯಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ತಿಳಿಸಿದರು.
ಅವರು ರವಿವಾರ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ, ಸಮಾಜ ಮುಖಂಡರ ಗುರುವಂದನಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಗುರುಪರಂಪರೆಯ ಇತಿಹಾಸಯುಳ್ಳ ಸಮಾಜವಾಗಿರುವದರಿಂದ, ಗುರುಗಳ ಮಾರ್ಗದರ್ಶನ ಹಾಗೂ ನೇತೃತ್ವ ಅವಶ್ಯಕವಾಗಿದೆ. ರಾಜ್ಯದ ಪ್ರತಿ ಜಿಲ್ಲೆಯವರು ಪ್ರತಿ ವರ್ಷ ಗುರುವಂದನಾ ಮಹೋತ್ಸವ ನಡೆಸಿಕೊಂಡು ಬಂದಿರುತ್ತಾರೆ. ಕೋವಿಡ್-೧೯ ಹಿನ್ನೆಲೆಯಲ್ಲಿ ಆಚರಿಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಬೆಳಗಾವಿ ಜಿಲ್ಲೆಯವರಿಂದ ನಡೆಯಿಸಿ ಕೊಡುವದಾಗಿದೆ. ಸಮಾಜ ಬಂಧುಗಳು ತನು, ಮನ ಧನ ಹಾಗೂ ನಿಸ್ವಾರ್ಥ ಮನಸ್ಸಿನಿಂದ ಗುರುಗಳ ಸೇವಾ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಈ ಸ್ಮರಣೀಯ ಗುರುವಂದನಾ ಮಹೋತ್ಸದಲ್ಲಿ ಪಾಲ್ಗೊಳ್ಳುವ ಮೂಲಕ ಸಂಘಟನೆ ಜೊತೆಗೆ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಬಲವರ್ದನೆಯಾಗಬೇಕು. ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿ ಬೆಳಗಾವಿ ಜಿಲ್ಲೆಯ ಹೆಸರನ್ನು ರಾಜ್ಯದಲ್ಲಿ ಗುರುತಿಸುವಂತೆ ಶ್ರಮವಹಿಸಬೇಕು. ಪ್ರತಿ ತಾಲೂಕು, ಹೊಬಳಿ, ಗ್ರಾಮ ಮಟ್ಟದಲ್ಲಿ ಚರ್ಚೆಗಳನ್ನು ಮಾಡಬೇಕು. ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುವವರಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿಕೊಂಡರು.
ತಾಲೂಕಾಧ್ಯಕ್ಷ ಡಾ. ಎಸ್.ಎಸ್ ಪಾಟೀಲ ಪ್ರಸ್ತಾವಿಕವಾಗಿ ಮಾತನಾಡಿ, ಸೇವಾ ಮನೋಭಾವನೆಯಿಂದ ಸಕಲರು ಕೈಜೋಡಿಸಬೇಕು ಹಾಗೂ ನೂತನ ತಾಲೂಕು ಕೇಂದ್ರವಾಗಿರುವದರಿoದ ಮುಂಬರುವ ದಿನಗಳಲ್ಲಿ ಕೈಗೊಳ್ಳಬಹುದಾದ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜದಲ್ಲಿ ಆಗುಹೋಗುಗಳ ಕುರಿತು ಚರ್ಚಿಸಿದರು. ಮುಂಬರುವ ದಿನಗಳಲ್ಲಿ ಕೈಗೊಳ್ಳಬಹುದಾದ ಕಾರ್ಯಗಳು ಮತ್ತು ಕಾರ್ಯಕ್ರಮ ಯಶಸ್ವಿಗೋಳಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಪದಾಧಿಕಾರಿಗಳು, ಸದಸ್ಯರು, ಮುಖಂಡರು ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಬೆಳಗಾವಿ ಜಿಲ್ಲಾ ಪ್ರದೇಶ ಕುರುಬರ ಸಂಘದ ಅಧ್ಯಕ್ಷ, ಮಾಜಿ ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ಪ್ರಧಾನ ಕಾರ್ಯದರ್ಶಿ ಎಚ್.ಎಸ್ ನಸಲಾಪೂರೆ, ಜಿಲ್ಲಾ ಸಮಿತಿಯ ವಿನಾಯಕ ಬನಹಟ್ಟಿ, ಟ್ರಸ್ಟಿಯಾದ ಸಿದ್ದಪ್ಪ ಪೂಜೇರ, ಶಿವಾಜಿ ಶಾಹಾಪೂರಕರ, ಶ್ರೀಮಂತ ಧನಗರ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ತಾಲೂಕಾ ಪ್ರದೇಶ ಕುರುಬರ ಸಂಘದ ಸದಸ್ಯರು, ಸಮಾಜ ಮುಖಂಡರು, ಯುವಕರು ಹಾಜರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page