ಬುಧವಾರ , ಮೇ 22 2024
kn
Breaking News

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ ೪ ಕೋಟಿ ರೂ. ಅನುದಾನ : ಬಾಳಪ್ಪ ಗೌಡರ

Spread the love

ಗೋಕಾಕ : ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ ೪ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು.
ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ ಯೋಜನೆಯಡಿ ಮಂಜೂರಾದ ೪ ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹದಗೆಟ್ಟ ರಸ್ತೆಗಳನ್ನು ಈಗಾಗಲೇ ದುರಸ್ತಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಳ್ಳಿಗುದ್ದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಗ್ರ ಪ್ರಗತಿಗೆ ಸಾಕಷ್ಟು ಜನಪರ ಕಾಮಗಾರಿಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅನುಷ್ಠಾನಗೊಳಿಸಿದ್ದಾರೆ. ಶಿಕ್ಷಣ, ಕೃಷಿ, ಆರೋಗ್ಯ, ನೀರಾವರಿ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ನೆರವೇರಿಸುವ ಮೂಲಕ ನಮ್ಮ ಜನರ ಮೂಲ ಸೌಕರ್ಯಗಳಿಗೆ ಸ್ಪಂದನೆ ಮಾಡುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯ ಸಿಗಬೇಕೆನ್ನುವ ಮಹತ್ವಾಕಾಂಕ್ಷೆ ಇಟ್ಟುಕೊಂಡು ಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಕಳೆದ ೧೮ ವರ್ಷಗಳಿಂದ ಸತತವಾಗಿ ಶ್ರಮಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಗೌಡರ ಹೇಳಿದರು.
ಈ ಸಂದರ್ಭದಲ್ಲಿ ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಹನಮಂತ ಅಳಗೋಡಿ, ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ಅಡಿವೆಪ್ಪ ಅಳಗೋಡಿ, ಕೌಜಲಗಿ ಗ್ರಾಪಂ ಅಧ್ಯಕ್ಷೆ ಭಾಗ್ಯಶ್ರೀ ಪಟ್ಟಣಶೆಟ್ಟಿ, ಕೌಜಲಗಿ ಯುವ ಧುರೀಣ ರವಿ ಪರುಶೆಟ್ಟಿ, ಕೌಜಲಗಿ ಪಿಕೆಪಿಎಸ್ ಮಾಜಿ ಅಧ್ಯಕ್ಷ ಮಹೇಶ ಪಟ್ಟಣಶೆಟ್ಟಿ, ರಡ್ಡೇರಹಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕರೆಪ್ಪ ಬಿಸಗುಪ್ಪಿ, ಕಳ್ಳಿಗುದ್ದಿ ಪಿಕೆಪಿಎಸ್ ಮಾಜಿ ಅಧ್ಯಕ್ಷ ವೆಂಕಟ ಮಳಲಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷö್ಮಣ ಚನ್ನಾಳ, ಲಕ್ಷö್ಮಣ ಸಂಕ್ರಿ, ದುಶ್ಯಂತ ದೇಸಾಯಿ, ಅಪ್ಪನಗೌಡ ಸಂಕ್ರಿ, ಸುಜೀತ ಹಾದಿಮನಿ, ಗೋಪಾಲ ಹರಿಜನ, ಲಕ್ಷö್ಮಣ ಕೊರತಿ, ಹನಮಂತ ಮಾವಿನಗಿಡದ, ಸೇರಿದಂತೆ ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page