ಮೂಡಲಗಿ: ಹರಿಹರದ ಕನಕ ಗುರು ಪೀಠದಲ್ಲಿ “ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ” ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ “ಹಕ್ಕೋತ್ತಾಯದ ಚಿಂತನ-ಮoಥನ ಸಭೆ” ಯನ್ನು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ ನಿರಂಜನಾನoದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಜು. ೩ ರವಿವಾರ ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕಗುರುಪೀಠದಲ್ಲಿ ಜರುಗಲಿದೆ ಎಂದು ಬೆಳಗಾವಿ ಜಿಲ್ಲಾ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ವಿನಾಯಕ ಕಟ್ಟಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯವನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಕುರುಬ ಸಮುದಾಯದ ಎಸ್. ಟಿ ಮನವಿಗೆ ಸ್ಪಂದಿಸಿದ್ದ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಲಾಗುತ್ತಿದೆ. ಅಧ್ಯಯನವು ಪೂರ್ಣಗೊಳ್ಳುವ ಹಂತ ತಲುಪಿದ್ದು, ರಾಜ್ಯ ಸರ್ಕಾರವು ವರದಿಯನ್ನು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಹಕ್ಕೊತ್ತಾಯದ ಸಲುವಾಗಿ ಚಿಂತನ ಮಂಥನ ಸಭೆಯಲ್ಲಿ ಜಗದ್ಗುರುಗಳ ಸಾನಿಧ್ಯದಲ್ಲಿ ನಡೆಯುವದು. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಪ್ರತಿನಿಧಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ನಿರ್ಣಯ ಮಂಡಿಸಿ, ಮುಖ್ಯಮಂತ್ರಿಗಳಿಗೆ ಮನವಿ ಮಾಡುವದು ಹಾಗೂ ಎಸ್.ಟಿ. ಮೀಸಲಾತಿಯ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಗುವದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Sarvavani Latest Kannada News