ಶುಕ್ರವಾರ , ಡಿಸೆಂಬರ್ 27 2024
kn
Breaking News

ಮಕ್ಕಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು : ಬಿಇಒ ಅಜಿತ ಮನ್ನಿಕೇರಿ

Spread the love

ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಇಲಾಖೆಯ, ಮಾರ್ಗದರ್ಶಕರ, ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಶಿಕ್ಷಣಕ್ಕೆ ಉಪಯುಕ್ತ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಕಲಿಕೆಗೆ ಯಾವುದೇ ರೀತಿಯಾಗಿ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.
ಅವರು ಶನಿವಾರ ಮೇಘಾ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ, ಶಿವಾಪೂರ(ಹ), ಹಳ್ಳೂರ, ನಾಗನೂರ, ಕಲ್ಲೋಳ್ಳಿ ಸಮೂಹ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಪ್ರಾರಂಭವಾಗಿರುವದರಿoದ ಅಗತ್ಯ ಶಾಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯ ಶಿಕ್ಷಕರಿಗೆ ಮಕ್ಕಳಿಗೆ ಅವಶ್ಯಕವಿರುವ ಸಾಮಗ್ರಿಗಳ ಬಳಕೆಯ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಅಗತ್ಯವಿರುವ ತಂತ್ರಾoಶದ ಕಾರ್ಯಗಳು ಸಕಾಲದಲ್ಲಿ ಮಾಡಬೇಕು. ಸದ್ಯದ ಸ್ಥಿತಿಯಲ್ಲಿ ಮಳೆಯಾಗುತ್ತಿರುವದರಿಂದ ನದಿ ಪಾತ್ರದ, ಹಳ್ಳ, ಕೆನಾಲ ಹಾಗೂ ಸೇತುವೆಗಳ ಕುರಿತು ಮುಂಜಾಗೃತಾ ಕ್ರಮವಹಿಸಬೇಕು. ವಿದ್ಯುತ್ ಅವಗಡಗಳು, ಶೀಥಿಲಾವಸ್ಥೆಯ ಕೊಠಡಿಗಳ ಹಾಗೂ ಕಂಪೌoಡಗಳ ಮೇಲೆ ಅಪಾಯದ ಎಚ್ಚರಿಕೆ ಕುರಿತು ಸೂಚನಾ ಫಲಕ ಅಳವಡಿಸಬೇಕು. ಶಾಲಾ ಹಂತದಲ್ಲಿ ಮಕ್ಕಳ ಕಲಿಕೆಗೆ ಯಾವುದೇ ರೀತಿಯ ತೊಂದರೆಯಾಗದ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ನುಡಿದರು.
ಗೋಕಾಕ ಮೂಡಲಗಿ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅಶೋಕ ಮಲಬನ್ನವರ ಮಾತನಾಡಿ, ಬಿಸಿಯೂಟ, ಕ್ಷೀರ ಭಾಗ್ಯ, ಮಾತ್ರೆಗಳ ವಿತರಣೆ ಸಮರ್ಪಕವಾಗಿ ಬಳಕೆಯಾಗಬೇಕು. ಆಹಾರ ಸಾಮಗ್ರಿಗಳು, ದಾಸ್ತಾನುಗಳು ಕೆಡದ ರೀತಿಯಲ್ಲಿ ಇಟ್ಟುಕೊಳ್ಳ ಬೇಕು. ಶಾಲೆಯಲ್ಲಿರುವ ಗ್ರಂಥಾಲಯ, ಅಡುಗೆ ಕೊಠಡಿ, ಶೌಚಾಲಯ, ಕುಡಿಯುವ ನೀರು, ಶಾಲಾವರಣ ಸ್ವಚ್ಚಯಿಂದ ಕುಡಿರುವ ಜೊತೆಗೆ ಪರಿಸರ ಕಾಳಜಿಯನ್ನು ಹೊಂದಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್, ಸಿಆರ್‌ಪಿಗಳಾದ ಸಮೀರಹ್ಮದ ದಬಾಡಿ, ಶ್ರೀಶೈಲ್ ಪಾಟೀಲ, ಬಸವರಾಜ ಪಾಟೀಲ, ಗಣಪತಿ ಉಪ್ಪಾರ ಹಾಗೂ ಮೂಡಲಗಿ, ಶಿವಾಪೂರ(ಹ), ಹಳ್ಳೂರ, ನಾಗನೂರ, ಕಲ್ಲೋಳ್ಳಿ ಸಮೂಹ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಹಾಜರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page