ಗುರುವಾರ , ಏಪ್ರಿಲ್ 25 2024
kn
Breaking News

ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ.

Spread the love

ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ ತಂತ್ರಜ್ಞಾನ ಮತ್ತು ತರಬೇತಿಗಳ ನೆರವು ನೀಡುವುದು ಜಿಟಿಟಿಸಿ ಸಂಸ್ಥೆಯ ಉದ್ಧೇಶವಾಗಿದ್ದು, ಈ ಸಂಸ್ಥೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉದ್ಯೋಗಾವಕಾಶಗಳು ಸಿಗುವುದು ಖಚಿತವೆಂದು ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಅಶ್ವತ್ಥ್ ನಾರಾಯಣ ಹೇಳಿದರು.

ಮಂಗಳವಾರದಂದು ತಾಲೂಕಿನ ಅರಭಾವಿ ಪಟ್ಟಣದ ನಾಡ ಕಛೇರಿ ಹತ್ತಿರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ 28 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸರಕಾರಿ ಉಪಕರಣಾಗಾರ ಮತ್ತು ಪರಿಣ ತಿ ಕೇಂದ್ರದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರ ಭವಿಷ್ಯಕ್ಕೆ ನಮ್ಮ ಸಂಸ್ಥೆ ಉತ್ತಮ ವೇದಿಕೆಯಾಗಿದ್ದು, ಇದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಅರಭಾವಿ ಕ್ಷೇತ್ರದಲ್ಲಿ ಜಿಟಿಟಿಸಿ ಸಂಸ್ಥೆಯನ್ನು ಆರಂಭಿಸುವುದರ ಮೂಲಕ ಈ ಭಾಗದಲ್ಲಿ ಯುವಕರಿಗೆ ಹೆಚ್ಚಿನ ಸೌಲಭ್ಯಗಳು ಸಿಗಲಿವೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲವಾಗಿ ಅರಭಾವಿಯಲ್ಲಿಂದು ಜಿಟಿಟಿಸಿ ಸಂಸ್ಥೆಯು ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿನ ಯುವಕರ ಭವಿಷ್ಯಕ್ಕೆ ಬಾಲಚಂದ್ರ ಜಾರಕಿಹೊಳಿ ಅವರು ಉತ್ತಮ ಅಡಿಪಾಯ ಹಾಕುತ್ತಿದ್ದಾರೆ. ಅವರ ದೂರದೃಷ್ಟಿಯ ಶ್ರಮದಿಂದ ಜಿಟಿಟಿಸಿ ಸಂಸ್ಥೆ ಆರಂಭವಾಗಿದೆ ಎಂದು ಹೇಳಿದರು.

ಈ ಸಂಸ್ಥೆಯಲ್ಲಿ ಕಲಿಯುವ ಯುವಕರಿಗೆ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ. 1972 ರಲ್ಲಿ ಡೆನ್ಮಾರ್ಕ್ ಸಹಯೋಗದೊಂದಿಗೆ ಆರಂಭಿಸಲಾದ ಜಿಟಿಟಿಸಿ ಜರ್ಮನಿ, ಅಮೇರಿಕಾ, ಫ್ರಾನ್ಸ್ ದೇಶಗಳ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಜೊತೆಗೆ ಟೊಯೇಟೋ ಕಿರ್ಲೋಸ್ಕರ್ ಕಂಪನಿ ಜೊತೆಗೂ ನಮ್ಮ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಮುಂದಿನ ಎರಡು ಹೊಸ ಕೋರ್ಸುಗಳನ್ನು 3 ವರ್ಷದ ಅವಧಿಗೆ ಪ್ರಾರಂಭಿಸಲಾಗುವುದು. ಪ್ರತಿ ವಿದ್ಯಾರ್ಥಿಗಳಿಗೆ ಮಾಸಿಕ 14 ಸಾವಿರ ರೂ. ನೀಡಲಿದ್ದು, ತರಬೇತಿ ಮುಗಿದ ಬಳಿಕ ಅಂತಹವರಿಗೆ ಜಿಟಿಟಿಸಿ ಸಂಸ್ಥೆಯು ಉದ್ಯೋಗ ನೀಡಲಿವೆ. ತಾಂತ್ರಿಕ ಮತ್ತು ಕೈಗಾರಿಕಾ ಉತ್ಪಾದನಾ ಕ್ಷೇತ್ರದಲ್ಲಿ ತರಬೇತಿ ನೀಡುವಲ್ಲಿ ಪರಣ ತ ಹೊಂದಿದ್ದು, ಜಾಗತೀಕ ಮಟ್ಟದಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಶಿಕ್ಷಣದ ಮೂಲಕ ತಯಾರಿಕೆಯ ಮೂಲಕ ಶಿಕ್ಷಣ ನೀಡುವ ಗುರಿ ಈ ಸಂಸ್ಥೆಯದ್ದಾಗಿದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಅಭ್ಯರ್ಥಿಗಳಿಗೆ ಆರ್ಥಿಕ ಸ್ವಾವಲಂಬನೆ ಹೊಂದಲು ಅಗತ್ಯವಾಗಿ ಬೇಕಿರುವ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಬೆಳಗಾವಿ, ಚಿಕ್ಕೋಡಿ ಮತ್ತು ಅರಭಾವಿ ಪಟ್ಟಣಗಳಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಅತೀ ಹೆಚ್ಚು ಜಿಟಿಟಿಸಿ ಕೇಂದ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿಯಾಗಿದೆ. ಇನ್ನೂ 6 ಕೇಂದ್ರಗಳನ್ನು ಪ್ರಾರಂಭಿಸುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2017 ರಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗಲು ಆ ಸರ್ಕಾರದಲ್ಲಿ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಮತ್ತು ಸತೀಶ ಜಾರಕಿಹೊಳಿ ಅವರುಗಳು ಕಾರಣರಾಗಿದ್ದಾರೆ. ಅವರಿಬ್ಬರನ್ನು ಮುಕ್ತ ಹೃದಯದಿಂದ ಅಭಿನಂದಿಸುವುದಾಗಿ ತಿಳಿಸಿದರು.
ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯವಾಗಿದೆ. ಉತ್ತಮ ಸಮಾಜ ನಿರ್ಮಾಣವಾಗಲು ಶಿಕ್ಷಣ ಅಗತ್ಯವಾಗಿದೆ. ಜಿಟಿಟಿಸಿಯಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ನೌಕರಿ ಖಚಿತವಾಗಿದೆ. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ ಅವರನ್ನು ಭವಿಷ್ಯದ ಭಾವಿ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಪಾಲಕರದ್ದಾಗಿದೆ. ಅರಭಾವಿ ಕ್ಷೇತ್ರವನ್ನು ವಿದ್ಯಾಕಾಶಿಯನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಿದೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲ ವರ್ಗಗಳ ಹಿತ ರಕ್ಷಣೆಗೆ ಬದ್ಧವಿದೆ. ಈ ದಿಸೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬಿಜೆಪಿಯೊಂದೇ ರಾಜ್ಯದಲ್ಲಿ ಸಮರ್ಥ ಆಡಳಿತ ನೀಡಲು ಬದ್ಧವಿದೆ ಎಂದು ಹೇಳಿದರು.

10 ಎಕರೆ ನಿವೇಶನದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಅರಭಾವಿಯಲ್ಲಿ 20 ಕೋಟಿ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ ವಸತಿ ಶಾಲೆಯ ಕಟ್ಟಡ ನಿರ್ಮಾಣವಾಗಲಿದೆ. ಆರ್‍ಟಿಓ ಕಛೇರಿಯೂ ಕೂಡ ಇಲ್ಲಿ ಪ್ರಾರಂಭವಾಗಲಿದೆ. ಇದಕ್ಕಾಗಿ ನಿವೇಶನವನ್ನು ಸಹ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ಜಿಟಿಟಿಸಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಎಚ್. ರಾಘವೇಂದ್ರ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಡಾ.ಎಂ.ಜಿ. ಹಿರೇಮಠ, ರಾಣ ಚನ್ನಮ್ಮಾ ವಿಶ್ವವಿದ್ಯಾಲಯದ ಕುಲಸಚಿವ ಬಸವರಾಜ ಪದ್ಮಶಾಲಿ, ವಲಯ ಅಧಿಕಾರಿ ಬಿ.ಜಿ. ಮೊಗೇರ, ಬೆಳಗಾವಿ ರಾಣ ಚನ್ನಮ್ಮಾ ವಿಶ್ವವಿದ್ಯಾಲಯ ರಜಿಸ್ಟ್ರಾರ್ ಚಂದ್ರಮೌಳಿ, ಗೋವಿಂದ ವತ್ಸ, ತಹಶೀಲ್ದಾಗ ಡಿ.ಜೆ. ಮಹಾತ, ಪಟ್ಟಣ ಪಂಚಾಯತ ಅಧ್ಯಕ್ಷ ಲಕ್ಷ್ಮಣ ನಿಂಗನ್ನವರ, ಪ್ರಾಂಶುಪಾಲ ಉಮೇಶ ಬಡಕುಂದ್ರಿ, ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page