ಮೂಡಲಗಿ: ಮುಂಬೈನಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿ ಮಾಡಿ ಶುಭಕೋರಿದರು.
ಈ ಸಮಯದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವಿನ ಸಂಬoಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚಿಸಲಾಯಿತು. ಹಾಗೂ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ಹರಿಬಿಡುವ ನೀರಿನ ಪ್ರಮಾಣದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.
