ಮೂಡಲಗಿ: ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಶುಕ್ರವಾರ ಜಾಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಮುಂಜಾಗೃತ ಕ್ರಮವಾಗಿ ಅವರಾದಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಲೀಲಾ ದಳವಾಯಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಅಗತ್ಯ ಮನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
