ಬುಧವಾರ , ಡಿಸೆಂಬರ್ 11 2024
kn
Breaking News

ನಶಾಮುಕ್ತ ಭಾರತ ಅಭಿಯಾನ, ಮಧ್ಯಪಾನ, ಮಾದಕ ವಸ್ತು ತಂಬಾಕು ವಸ್ತುಗಳು ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ

Spread the love

ಮೂಡಲಗಿ: ಧೂಮಪಾನ, ಮಧ್ಯಪಾನದ ದಾಸ್ಯಕ್ಕೆ ಒಳಗಾಗಿ ಕ್ಯಾನ್ಸರ್, ಹೃದಯಾಘಾತ, ಅಲ್ಸರ ಸೇರಿದಂತೆ ಇತರೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಬಳಲಿ ನಿತ್ಯ ಸಾಯುತ್ತಿರುವುದನ್ನು ಮನಗಂಡು ವ್ಯಸನ ಮುಕ್ತ-ಸ್ವಚ್ಚ ಪರಿಸರಯುಕ್ತ ಸಮಾಜಕ್ಕಾಗಿ ಯುವ ಜನತೆಯನ್ನು ತೊಡಗಿಸುವ ಉದ್ದೇಶದಿಂದ ನಶಾಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ|| ಎಮ್. ಜಿ. ಕೆರುಟಗಿ ಹೇಳಿದರು.
ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾದ, ಡಾ. ಮಹಾಂತ ಶಿವಯೋಗಿ ಸ್ವಾಮಿಜಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆಯಿಂದ ವ್ಯಕಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೆ ಮಾರಕವಾಗಿದೆ ಎಂದರು.
ಮದ್ಯಪಾನ, ಮಾದಕ ವಸ್ತು ತಂಬಾಕು ವಸ್ತುಗಳ ಸೇವನೆಯು ಮಾನವ ಸಮಾಜಕ್ಕೆ ಮಾರಕವೆಂದು, ಇದರಿಂದ ಮಾನವನ ದೇಹವಲ್ಲದೇ, ಮನಸ್ಸು ಮತ್ತು ಸ್ವಾಸ್ಥ್ಯ ಸಮಾಜ ಅನಾರೋಗ್ಯ ಪೀಡಿತವಾಗುತ್ತಿರುವುದು ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶದ ಯುವ ಜನತೆ ಇದರ ದಾಸ್ಯಕ್ಕೆ ಒಳಗಾಗುತ್ತಿರುವುದು ಮಾನವ ಆರ್ಥಿಕ, ಸಾಮಾಜಿಕ ಸ್ಥಿತಿ ಅಧೋಗತಿಗೆ ಇಳಿಯುತ್ತಿದೆ. ಆದ್ದರಿಂದ ಡಾ. ಮಹಾಂತ ಶಿವಯೋಗಿ ಸ್ವಾಮಿಜಿಗಳ ಜನ್ಮ ದಿನದ ಪ್ರಯುಕ್ತ ನಾವು ಮಧ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳನ್ನು ತ್ಯೆಜಿಸುತ್ತೇವೆ ಹಾಗೂ ಇನ್ನೆಂದಿಗೂ ಮುಟ್ಟುವುದಿಲ್ಲ ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು.
ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಧಿಕಾರಿಯಾದ ಡಾ. ಎ.ಎಮ್. ನಧಾಫ, ಡಾ. ಪುಷ್ಪಾ ಟಿ.ಎನ್, ಡಾ. ವಿಜಯ ಮಹಾಂತೇಶ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page