ಶನಿವಾರ , ನವೆಂಬರ್ 9 2024
kn
Breaking News

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟoಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-೧ ಮತ್ತು ಖಜಾನೆ-೨ ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದು ಹೇಳಿದರು.
ಮೂಡಲಗಿಯಲ್ಲಿ ಉಪನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ತಹಶೀಲ್ದಾರ ಕಛೇರಿ ಹತ್ತಿರ ೩ ಕೊಠಡಿಗಳನ್ನು ನೀಡಲಾಗಿದೆ. ಜೊತೆಗೆ ಫರ್ನಿಚರ್ ಕಾಮಗಾರಿಯು ಈಗಾಗಲೇ ಮುಗಿದಿದೆ. ಮೂಡಲಗಿ ಹೊಸ ತಾಲೂಕು ರಚನೆಯಾದ ನಂತರ ಸಾರ್ವಜನಿಕರ ಬೇಡಿಕೆ ದಿನೇ ದಿನೇ ಹೆಚ್ಚುತ್ತಿತ್ತು. ಗೋಕಾಕದಲ್ಲಿ ರೈತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿರುವುದರಿಂದ ಮೂಡಲಗಿ ತಾಲೂಕಿನ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿಯೇ ಉಪನೋಂದಣಾಧಿಕಾರಿಗಳ ಕಛೇರಿ ಆರಂಭವಾಗಲಿದೆ. ಇಡೀ ತಾಲೂಕಿನ ರೈತರ ಸೇವೆಗೆ ಕಛೇರಿಯು ಅಣಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page