ಭಾನುವಾರ , ಜೂನ್ 16 2024
kn
Breaking News

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the love

ಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ಶನಿವಾರದಂದು ಜರುಗಿದ ಕಿತ್ತೂರು ಚನ್ನಮ್ಮ ಯುವಕ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು 2ಎ ಮೀಸಲಾತಿ ಸಂಬoಧ ಹಲವು ದಿನಗಳಿಂದ ಹೋರಾಟಕ್ಕೆ ಇಳಿದಿದ್ದು, ಅವರಿಗೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ತಿಳಿಸಿದರು.

ಈ ಸಮುದಾಯದ ಜೊತೆಗೆ ಉಪ್ಪಾರ ಹಾಗೂ ಕುರುಬ ಸಮಾಜದವರು ಸಹ ತಮ್ಮ ಸಮಾಜವನ್ನು ಎಸ್ಸಿ ಅಥವಾ ಎಸ್ಟಿಗೆ ಸೇರ್ಪಡೆ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾದಿಗ ಸಮಾಜದವರು ಸಹ ನ್ಯಾ ಸದಾಶಿವ ಆಯೋಗದ ಜಾರಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದಾರೆ. ಈ ಸಮುದಾಯಗಳ ಮೀಸಲಾತಿ ಸಂಬoಧ ನಡೆಯುತ್ತಿರುವ ಹೋರಾಟಕ್ಕೆ ನಾನು ಸದಾ ಬೆನ್ನೆಲಬಾಗಿ ನಿಲ್ಲುತ್ತೇನೆ. ಆದರೆ ಮೀಸಲಾತಿಗಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಜಿಲ್ಲೆಯ ಎಲ್ಲ ನಾಯಕರುಗಳನ್ನು ಪಕ್ಷಾತೀತವಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾವೆಲ್ಲರೂ ಒಗ್ಗಟಿನಿಂದ ಕೂಡಿಕೊಂಡು ಮುಖ್ಯಮಂತ್ರಿಗಳ ಮೇಲೆ ಹಕ್ಕೋತ್ತಾಯ ಮಂಡಿಸೋಣ. ಶೀಘ್ರದಲ್ಲಿಯೇ ಎಲ್ಲ ಜನಪ್ರತಿನಿಧಿಗಳು, ಆಯಾ ಸಮಾಜಗಳ ಮುಖಂಡರು ಸೇರಿಕೊಂಡು ಸಭೆ ನಡೆಸಿ ಬೆಂಗಳೂರಿಗೆ ನಿಯೋಗವನ್ನು ತೆಗೆದುಕೊಂಡು ಹೋಗೊಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ಹೇರೋಣ. ಮೀಸಲಾತಿ ಹೋರಾಟವನ್ನು ಯಶ್ವಸಿಗೊಳಿಸೋಣ ಎಂದು ಅವರು ತಿಳಿಸಿದರು.

ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮಾಜಗಳಿಗೆ ಮೀಸಲಾತಿ ನೀಡಿದರೇ ಬೇರೆ ಸಮಾಜಗಳಿಗೆ ಅನ್ಯಾಯವಾಗುವುದಿಲ್ಲ. ತಮಿಳುನಾಡಿನಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು 9 ಶೇಡ್ಯುಲ್ ಮಾಡಿದ್ದರಿಂದ ನಮ್ಮಲ್ಲಿಯು ಕೂಡಾ ಮುಖ್ಯಮಂತ್ರಿಗಳು ತಮಿಳುನಾಡಿನ ಮಾದರಿ ಅನುಸರಿಕೊಂಡು ಹೋದರೆ ಯಾರೊಬ್ಬರೂ ಕೋರ್ಟ- ಕಚೇರಿಗೆ ಅಲಿಯಲಿಕ್ಕೆ ಬರುವುದಿಲ್ಲ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ 9 ಶೇಡ್ಯುಲ್ ಮಾಡಿದರೇ ಮೀಸಲಾತಿ ಸಂಬoಧ ನಡೆಸುತ್ತಿರುವ ಆಯಾ ಸಮಾಜಗಳಿಗೆ ಸರ್ಕಾರದ ಮೀಸಲಾತಿ ಸಿಕ್ಕೆಸಿಗುತ್ತದೆ. ಯಾವ ಸಮಾಜಕ್ಕೂ ಇದರಿಂದ ಅನ್ಯಾಯವಾಗುವುದಿಲ್ಲ. ಇತಿಚ್ಚೀಗೆ ನಮ್ಮ ಸರ್ಕಾರವು ಎಸ್ಸಿ ಎಸ್ಟಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಳ ಮಾಡಿದೆ ಎಂದು ಹೇಳಿದರು.

ತಿಂಗಳಾoತ್ಯಕ್ಕೆ ಸಬ್ ರೀಜಿಸ್ಟರ್ ಕಚೇರ ಕಾರ್ಯಾರಂಭ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುಮುಖ್ಯ ಬೇಡಿಕೆಯಗಿರುವ ಉಪನೋಂದಣಿ ಅಧಿಕಾರಿಗಳ ಕಚೇರಿಯು ಇದೇ ತಿಂಗಳ ಅಂತ್ಯದೊಳಗೆ ಕಾರ್ಯರಂಭ ಮಾಡಲಿದೆ. ಈಗಾಗಲೇ ಕಚೇರಿಯ ಆರಂಭಕ್ಕೆ ಅಗತ್ಯವಿರುವ ಎಲ್ಲ ಕಾರ್ಯಗಳು ಪೂರ್ಣಗೊಂಡಿವೆ ಇನ್ನೂ ಕಚೇರಿ ಆರಂಭಿಸುವುದು ಮಾತ್ರ ಬಾಕಿ ಇದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸ್ವಾತಂತ್ರ ಹೋರಾಟದಲ್ಲಿ ಕಿತ್ತೂರು ಚನ್ನಮ್ಮ, ಸಂಗೋಳ್ಳಿ ರಾಯಣ್ಣ ಸೇರಿದಂತೆ ಅನೇಕರ ತ್ಯಾಗ ಬಲಿದಾನವಿದೆ ಬ್ರೀಟಿಷರ ವಿರುದ್ದ ಹೋರಾಡಿದ ಕಿತ್ತೂರು ಚನ್ನಮ್ಮ ಹಾಗೂ ಸಂಗೋಳ್ಳಿ ರಾಯಣ್ಣ ನಮ್ಮ ಬೆಳಗಾವಿ ನೆಲದವರು ಎಂಬುವುದು ಇನ್ನೂ ಹೆಮ್ಮೆ ಮತ್ತು ಅಭಿಮಾನದ ಸಂಗತಿಯಾಗಿದೆ. ಕಿತ್ತೂರು ಚನ್ನಮ್ಮನ ಹಾಗೂ ಸಂಗೋಳ್ಳಿ ರಾಯಣ್ಣನ ಹೋರಾಟದ ಮನೋಭಾವನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರಸ್ತತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಮೃತಬೋಧ ಸ್ವಾಮಿಜಿ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಸಹಕಾರಿ ಧುರೀಣ ಬಿ ಆರ್ ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ, ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಡಿ ಡಿ ಪಾಟೀಲ, ಬಸವಪ್ರಭು ನಿಡಗುಂಡಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನಿಲಕಂಠ ಕಪ್ಪಲಗುದ್ದಿ, ಆರ್ ಪಿ ಸೋಲವಾಲ್ಕರ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಬಸವರಾಜ ಪಾಟೀಲ, ಸುಭಾಷ ಪಾಟೀಲ, ಮಲ್ಲು ಪಾಟೀಲ, ತಿಪ್ಪಣ್ಣ ಕುರಬಗಟ್ಟಿ, ಶಿವನಗೌಡ ಪಾಟೀಲ, ಹಣಮಂತ ತೇರದಾಳ, ರಾಜು ಬೈರಗೋಳ, ಮಲ್ಲಿಕಾರ್ಜುನ ಕಬ್ಬೂರ, ಎಮ್ ಎಮ್ ಪಾಟೀಲ, ಕಿತ್ತೂರು ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವೇದಮೂರ್ತಿ ನಿರಂಜನ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಕಿತ್ತೂರು ಚನ್ನಮ್ಮಳ ಹೋರಾಟಗಳನ್ನು ವಿವರಿಸಿದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page