ಗುರುವಾರ , ಜೂನ್ 20 2024
kn
Breaking News

ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ತಮ್ಮ ವೈಯಕ್ತಿಕ ಕುಂದು-ಕೊರತೆಗಳು, ಸರ್ಕಾರಿ ಸೌಲಭ್ಯಗಳು, ಅಭಿವೃದ್ಧಿಪರ ಕೆಲಸಗಳು ಹಾಗೂ ಸಲಹೆ ಸೂಚನೆಗಳನ್ನು ನೀಡಲು ಈ ಕಛೇರಿಯನ್ನು ತೆರೆದಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದ ಮಾದರಿಯಂತೆ ಮೂಡಲಗಿಯಲ್ಲಿಯೂ ಸಹ ಕೆಲಸ ನಿರ್ವಹಿಸಲು ಸಿಬ್ಬಂದಿಗೆ ಸೂಚಿಸಲಾಗಿದ್ದು, ಸಾರ್ವಜನಿಕರು ತಮ್ಮ ದೂರು, ದುಃಖ, ದುಮ್ಮಾನಗಳನ್ನು ಹೇಳಿಕೊಳ್ಳಲು ಈ ಕಛೇರಿಯು ಅವಶ್ಯವಾಗಿಯೂ ಸ್ಪಂದನೆ ನೀಡಲಿದೆ ಎಂದು ಹೇಳಿದರು.
ಮೂಡಲಗಿ ಪಟ್ಟಣದ ಅಭಿವೃದ್ಧಿ ಜೊತೆಗೆ ಅರಭಾವಿ ಮತಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಶ್ರಮಿಸಲಾಗುತ್ತಿದ್ದು, ಅದರಲ್ಲೂ ಮೂಡಲಗಿ ಪುರಸಭೆಯ ಅಭಿವೃದ್ಧಿಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೊಸ ತಾಲೂಕಿನ ಸೌಂದರ್ಯಿಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ರಸ್ತೆಗಳ ಸುಧಾರಣೆಗಾಗಿಯೂ ಕೂಡ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ತಹಶೀಲ್ದಾರ ಕಛೇರಿಯಿಂದ ಮುಖ್ಯ ರಸ್ತೆ ಮತ್ತು ಕಾಲೇಜು ರಸ್ತೆಯಿಂದ ಮೂಡಲಗಿ ಕ್ರಾಸ್‍ವರೆಗೆ ಸುಮಾರು 4 ಕಿ.ಮೀ ವರೆಗಿನ ರಸ್ತೆ ಕಾಮಗಾರಿಯನ್ನು ತ್ವರೀತವಾಗಿ ನಿರ್ಮಿಸಲು ನಿರ್ಧರಿಸಲಾಗಿದೆ. ಕೋವಿಡ್ ಕಾರಣದಿಂದ ಮೂಡಲಗಿ ಪುರಸಭೆಯಲ್ಲಿ ಅನುದಾನದ ಕೊರತೆ ಇರುವದರಿಂದ ಎರಡೂ ರಸ್ತೆ ಕಾಮಗಾರಿಗಳನ್ನು ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿದ್ದು, ಸಾರ್ವಜನಿಕರ ಸಂಚಾರಕ್ಕಾಗಿ ರಸ್ತೆಗಳ ಸುಧಾರಣೆ ಅತೀ ಅವಶ್ಯವಾಗಿದೆ ಎಂದು ಹೇಳಿದರು.
ರಾಘವೇಂದ್ರ ಆಚಾರ್ಯ ಮತ್ತು ಗುಂಡು ಆಚಾರ್ಯ ಅವರು ಶಾಸಕರ ನೂತನ ಕಛೇರಿಯ ಪೂಜಾ ಕಾರ್ಯಗಳನ್ನು ನೆರವೇರಿಸಿದರು.
ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಮುಖಂಡರಾದ ರವಿ ಸೋನವಾಲಕರ, ಪುರಸಭೆ ಮಾಜಿ ಅಧ್ಯಕ್ಷರಾದ ರಾಮಣ್ಣಾ ಹಂದಿಗುಂದ, ರವಿ ಸಣ್ಣಕ್ಕಿ, ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯ ಸೋನವಾಲಕರ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಸಂತೋಷ ಸೋನವಾಲಕರ, ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ್ಮ, ಟಿಎಪಿಸಿಎಂಎಸ್ ನಿರ್ದೇಶಕ ವೆಂಕನಗೌಡ ಪಾಟೀಲ, ರಮೇಶ ಸಣ್ಣಕ್ಕಿ, ಹುಸೇನಸಾಬ ಶೇಖ, ಸಿದ್ದು ಕೋಟಗಿ, ಪ್ರಶಾಂತ ನಿಡಗುಂದಿ, ಅನ್ವರ ನದಾಫ, ಮರೆಪ್ಪ ಮರೆಪ್ಪಗೋಳ, ರಾಮು ಝಂಡೇಕುರುಬರ, ದಶರಥ ಗಾಡಿವಡ್ಡರ, ಸಂತೋಷ ಪಾರ್ಶಿ, ತಹಶೀಲ್ದಾರ ಡಿ.ಜೆ. ಮಹಾತ, ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ, ಸಿಪಿಐ ವೆಂಕಟೇಶ ಮುರನಾಳ, ಸಿಡಿಪಿಓ ವಾಯ್.ಎಂ. ಗುಜನಟ್ಟಿ, ಬಿಇಓ ಅಜೀತ ಮನ್ನಿಕೇರಿ, ಪಿಎಸ್‍ಐ ಎಚ್.ವಾಯ್. ಬಾಲದಂಡಿ, ಕಸಾಪ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ, ಸಾಹಿತಿ ಹಾಗೂ ಪತ್ರಕರ್ತ ಬಿ.ಪಿ. ಬಂದಿ, ಪ್ರೊ. ಸಂಗಮೇಶ ಗುಜಗೊಂಡ, ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳ ಸಾರ್ವಜನಿಕರು, ಬಿಜೆಪಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮೂಡಲಗಿಯಲ್ಲಿ ಹೊಸ ಕಛೇರಿಯನ್ನು ಆರಂಭಿಸಿರುವುದಕ್ಕೆ ನಾಗರೀಕರು ಹರ್ಷ ವ್ಯಕ್ತಪಡಿಸಿ ಅವರನ್ನು ಸತ್ಕರಿಸಿದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page